Wednesday, Feb 26 2020 | Time 10:31 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ದೇವಿಂದರ್ ಸಿಂಗ್ ಪ್ರಕರಣದ ತನಿಖೆ ವಹಿಸಿಕೊಂಡ ಎನ್‌ಐಎ

ನವದೆಹಲಿ, ಜ .18 (ಯುಎನ್‌ಐ) ಸೇವೆಯಿಂದ ವಜಾಗೊಳಿಸಲ್ಪಟ್ಟ ಕಾಶ್ಮೀರ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ದೇವಿಂದರ್ ಸಿಂಗ್ ಅವರ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕೃತವಾಗಿ ವಹಿಸಿಕೊಂಡಿದೆ ಎಂದು ಅಧಿಕೃತ ಹೇಳಿಕೆ ಶನಿವಾರ ತಿಳಿಸಿದೆ.
ಕೇಂದ್ರ ಗೃಹ ಸಚಿವಾಲಯದ ಆದೇಶ ಹೊರಡಿಸಿದ ನಂತರ, ಎನ್‌ಐಎ ಈ ಪ್ರಕರಣವನ್ನು ಆರ್‌ಸಿ ಸಂಖ್ಯೆ 01/2020 / ಎನ್‌ಐಎ ಎಂದು ಮರು ನೋಂದಾಯಿಸಿ, ತನಿಖೆಯನ್ನು ಪ್ರಾರಂಭಿಸಿದೆ ಎಂದು ತನಿಖಾ ಸಂಸ್ಥೆ ತಿಳಿಸಿದೆ.
ಕುಲ್ಗಾಮ್ ಜಿಲ್ಲೆಯ ಮಿರ್ ಬಜಾರ್ ಬಳಿ ಶಸ್ತ್ರಾಸ್ತ್ರ ಮತ್ತು ಸ್ಪೋಟಕಗಳೊಂದಿಗೆ ಮೂವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರು ಸಾಗುತ್ತಿದ್ದ ಅದೇ ಕಾರಿನಲ್ಲಿ ದೇವಿಂದರ್ ಸಿಂಗ್ ಜನವರಿ 11 ರಂದು ರಾಜ್ಯ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು.
ಜಮ್ಮು-ಕಾಶ್ಮೀರ ಪೊಲೀಸರು ಬಂಧಿತ ಆರೋಪಿಗಳ ವಿರುದ್ಧ ಅದೇ ದಿನ 7,25 ಶಸ್ತ್ರಾಸ್ತ್ರ ಕಾಯ್ದೆ, 3,4 ಸ್ಫೋಟಕ ಪದಾರ್ಥಗಳ ಕಾಯ್ದೆ ಮತ್ತು ಯುಎ (ಪಿ) ಕಾಯ್ದೆಯ ಸೆಕ್ಷನ್ 18,19,20,38, 39 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಪ್ರಕರಣದ ದಾಖಲಿಸಿದ ನಂತರ, ಭಯೋತ್ಪಾದಕರನ್ನು ಜಮ್ಮುವಿಗೆ ಕರೆದೊಯ್ಯುವ ಅವರ ನಿಖರವಾದ ಉದ್ದೇಶವನ್ನು ಕಂಡುಹಿಡಿಯಲು ತನಿಖಾ ಸಂಸ್ಥೆ ಸಿಂಗ್ ಅವರನ್ನು ಪ್ರಶ್ನಿಸುತ್ತದೆ.
ಜಮ್ಮು-ಕಾಶ್ಮೀರ ಪೊಲೀಸ್, ಎನ್ಐಎ, ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ) ಮತ್ತು ಇಂಟೆಲಿಜೆನ್ಸ್ ಬ್ಯೂರೊ ಜಂಟಿ ತಂಡವು ತೀವ್ರ ವಿಚಾರಣೆ ನಡೆಸಿದೆ.
ರಾಜ್ಯ ಪೊಲೀಸರು ಭಯೋತ್ಪಾದಕರ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದರು. ಈ ವೇಳೆ ದೇವಿಂದರ್ ಸಿಂಗ್ ಉಗ್ರರೊಂದಿಗೆ ಸಿಕ್ಕಿಬಿದ್ದಿದ್ದಾರೆ.
ಯುಎನ್ಐ ಎಎಚ್ 2117