Wednesday, Feb 26 2020 | Time 10:35 Hrs(IST)
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
National Share

ದೇಶವನ್ನು ನಿರುದ್ಯೋಗಿಗಳ ಕೊಂಪೆ ಮಾಡಿದ ಮೋದಿ: ರಾಹುಲ್ ವಾಗ್ದಾಳಿ

ದೇಶವನ್ನು ನಿರುದ್ಯೋಗಿಗಳ ಕೊಂಪೆ ಮಾಡಿದ  ಮೋದಿ: ರಾಹುಲ್ ವಾಗ್ದಾಳಿ
ದೇಶವನ್ನು ನಿರುದ್ಯೋಗಿಗಳ ಕೊಂಪೆ ಮಾಡಿದ ಮೋದಿ: ರಾಹುಲ್ ವಾಗ್ದಾಳಿ

ನವದೆಹಲಿ, ಜನವರಿ, 8(ಯುಎನ್ಐ) ಕೇಂದ್ರ ಸರ್ಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಯ ವಿರುದ್ಧ ದೇಶಾದ್ಯಂತ ವಿವಿಧ ಕಾರ್ಮಿಕ ಸಂಘಟನೆಗಳು ನಡೆಸುತ್ತಿರುವ ಬಂದ್ ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ನರೇಂದ್ರ ಮೋದಿ- ಅಮಿತ್ ಷಾ ಸರ್ಕಾರ ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳಿಂದಾಗಿ ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆ ತಲೆದೋರಿದೆ ಎಂದು ಅವರು ದೂರಿದ್ದಾರೆ.

ನರೇಂದ್ರ ಮೋದಿಯವರು ತಮ್ಮ ಬಾಲಬುಡುಕರಿಗೆ,ಬೇಕಾದ ಕೆಲವೇ ಕೆಲವು ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ದೇಶದ ಸಾರ್ವಜನಿಕ ವಲಯದ ಉದ್ಯಮಗಳನ್ನು ವಿನಾಶದ ಅಂಚಿಗೆ ನೂಕುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ಇಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾ ದ್ಯೋತಕವಾಗಿ ಭಾರತ್ ಬಂದ್ ನಡೆಸುತ್ತಿರುವ 25 ಕೋಟಿ ಕಾರ್ಮಿಕರಿಗೆ ಸೆಲ್ಯೂಟ್ ಎಂದು ರಾಹುಲ್ ಗಾಂಧಿ ಪೋಸ್ಟ್ ಹಾಕಿದ್ದಾರೆ.

ಕೇಂದ್ರ ಸರ್ಕಾರದ ಜನವಿರೋಧಿ, ಕಾರ್ಮಿಕ ನೀತಿಗೆ ವಿರೋಧ ವ್ಯಕ್ತಪಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶಾದ್ಯಂತ ಸುಮಾರು 10 ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ ನಡೆಸುತ್ತಿವೆ .

ಯುಎನ್ಐ ಕೆಎಸ್ಆರ್ 1340