Sunday, Mar 29 2020 | Time 00:41 Hrs(IST)
National Share

ದೇಶಾದ್ಯಂತ 1,023 ತ್ವರಿತ ನ್ಯಾಯಾಲಯಗಳ ಸ್ಥಾಪನೆ

ನವದೆಹಲಿ, ಡಿ.9 (ಯುಎನ್‌ಐ) ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಘಟನೆಗಳು ಮತ್ತೆ ಮುನ್ನೆಲೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಬಾಕಿ ಇರುವ ಅತ್ಯಾಚಾರ ಮತ್ತು ಪೊಕ್ಸೊ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ ದೇಶಾದ್ಯಂತ 1,023 ವಿಶೇಷ ತ್ವರಿತ ನ್ಯಾಯಾಲಯಗಳನ್ನ ಸ್ಥಾಪಿಸಲು ನಿರ್ಧರಿಸಿದೆ.

ಇನ್ನೊಂದೆಡೆ, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮತ್ತು ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ, ಮಕ್ಕಳ ಅಪೌಷ್ಠಿಕತೆಯ ವಿರುದ್ಧ ಹೋರಾಟಕ್ಕೆ ಬಿಲ್ ಮತ್ತು ಮೆಲಿಂದಾ ಗೇಟ್ಸ್ ಫೌಂಡೇಷನ್ ಸಹ ಅಧ್ಯಕ್ಷ ಬಿಲ್ ಗೇಟ್ಸ್ ಜೊತೆಗೆ 2019ರ ನ. 18ರಂದು ನವದೆಹಲಿಯಲ್ಲಿ ಭಾರತೀಯ ಪೋಷಣ್ ಕೃಷಿ ಕೋಶವನ್ನು ಸ್ಥಾಪಿಸಿದ್ದಾರೆ.

2019ರ ಆಗಸ್ಟ್ ನಲ್ಲಿ ಸರ್ಕಾರ ದೇಶಾದ್ಯಂತ ಪೋಕ್ಸೋ ಕಾಯ್ದೆ ಮತ್ತು ಅತ್ಯಾಚಾರ ಪ್ರಕರಣಗಳ ಕ್ಷಿಪ್ರ ವಿಲೇವಾರಿಗೆ 1023 ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸುವ ಯೋಜನೆಯನ್ನು ಅಂತಿಮಗೊಳಿಸಿತ್ತು. ಇದು ಕೇಂದ್ರ ಸರ್ಕಾರದ ಪ್ರಾಯೋಜಕತ್ವದ ಯೋಜನೆಯಾಗಿದ್ದು, 2019-20 ಹಾಗೂ 2020-21ರ ಆರ್ಥಿಕ ವರ್ಷಗಳಲ್ಲಿ ಜಾರಿಗೆ ಬರಲಿದೆ./

ಇತ್ತೀಚೆಗೆ ಅಪರಾಧಿಕ ಕಾನೂನು (ತಿದ್ದುಪಡಿ) ಕಾಯ್ದೆ 2018ರ ಮೂಲಕ ಅತ್ಯಾಚಾರ ಕಾನೂನನ್ನು ಕಠಿಣಗೊಳಿಸಲಾಗಿದ್ದು, 12 ವರ್ಷಕ್ಕಿಂತ ಸಣ್ಣ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳಿಗೆ ಮರಣದಂಡನೆಯನ್ನು ವಿಧಿಸುವ ಅವಕಾಶಗಳನ್ನು ಒಳಗೊಂಡಿದೆ. ಈ ಕಾಯ್ದೆಯ ಪ್ರಕರಣ, ಪ್ರತಿ ಪ್ರಕರಣವನ್ನು ಎರಡು ತಿಂಗಳೊಳಗೆ ತನಿಖೆ, ವಿಚಾರಣೆ ಪೂರ್ಣಗೊಳಿಸಬೇಕು.

2018ರ ಸೆಪ್ಟೆಂಬರ್ 2018ರಲ್ಲಿ ಬಿಡುಗಡೆಗೊಂಡ ‘ಲೈಂಗಿಕ ಅಪರಾಧಿಗಳ ರಾಷ್ಟ್ರೀಯ ದತ್ತಾಂಶ’, ಲೈಂಗಿಕ ಅಪರಾಧಿಕಗಳ ಮೇಲೆ ಹದ್ದಿನ ಕಣ್ಣು ಇರಿಸಿ, ನಿಗದಿತ ಕಾಲಾವಧಿಯಲ್ಲಿ ತನಿಖೆ, ವಿಚಾರಣೆ ನಡೆಸುವ ಗುರಿ ಹೊಂದಿದೆ.

ತನಿಖೆಗೆ ಹೆಚ್ಚಿನ ನೆರವಾಗುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯಗಳ ವಿಧಿವಿಜ್ಞಾನ ಪ್ರಯೋಗಾಲಯಗಳಲ್ಲಿ ಡಿಎನ್ ಎ ಪರೀಕ್ಷಾ ವಿಧಾನಗಳನ್ನು ಬಲಗೊಳಿಸಲಾಗಿದೆ. ಇಲ್ಲಿಯವರೆಗೆ ಸುಮಾರು 6,023 ಅಧಿಕಾರಿಗಳಿಗೆ ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋ(ಬಿಪಿಆರ್&ಡಿ) ತರಬೇತಿ ನೀಡಲಾಗಿದೆ ಮತ್ತು ಲೋಕನಾಯಕ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಕ್ರಿಮಿನಾಲಜಿ ಸಂಸ್ಥೆ ಮತ್ತು ವಿಧಿವಿಜ್ಞಾನದಲ್ಲಿ 3,120 ಲೈಂಗಿಕ ಅಪರಾಧಗಳ ಸಾಕ್ಷ್ಯಗಳ ಸಂಗ್ರಹ ಕಿಟ್ ಅನ್ನು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿತರಿಸಲಾಗಿದೆ.

ಪೋಕ್ಸೋ ಕಾಯ್ದೆಯ ಸೆಕ್ಷನ್ 28ರ ಅಡಿಯಲ್ಲಿ ವಿಶೇಷ ತ್ವರಿತ ನ್ಯಾಯಾಲಯಗಳು, ಅಪ್ರಾಪ್ತ ಸಂತ್ರಸ್ತರ ಹೇಳಿಕೆಗಳನ್ನು 30 ದಿನಗಳಲ್ಲಿ ಸಂಗ್ರಹಿಸಬೇಕು ಮತ್ತು ಒಂದು ವರ್ಷದೊಳಿಗೆ ವಿಚಾರಣೆ ಪೂರ್ಣಗೊಳಿಸಬೇಕು ಎಂಬ ನಿಯಮಕ್ಕೆ ಒಳಪಡುತ್ತವೆ.

ಯುಎನ್ಐ ಎಸ್ಎಚ್ 1132
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..