Sunday, Mar 29 2020 | Time 00:10 Hrs(IST)
National Share

ದೋಷಾರೋಪಪಟ್ಟಿ ಸಲ್ಲಿಸಲು ವಿಫಲ: ಪುಲ್ವಾಮ ದಾಳಿಕೋರನಿಗೆ ದೆಹಲಿ ನ್ಯಾಯಾಲಯದಿಂದ ಜಾಮೀನು

ನವದೆಹಲಿ, ಫೆಬ್ರವರಿ 27 (ಯುಎನ್‌ಐ) ಪುಲ್ವಾಮಾ ದಾಳಿ ಪ್ರಕರಣದ ಆರೋಪಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಿಗದಿತ ಅವಧಿಯೊಳಗೆ ಚಾರ್ಜ್‌ಶೀಟ್ ಸಲ್ಲಿಸಲು ವಿಫಲವಾದ ಕಾರಣ ದೆಹಲಿಯ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.
ಫೆಬ್ರವರಿ 14, 2019 ರಂದು ಪುಲ್ವಾಮಾ ಜಿಲ್ಲೆಯ ಜಮ್ಮು ಶ್ರೀನಗರ ಹೆದ್ದಾರಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)ಯ ಬೆಂಗಾವಲು ವಾಹನದ ಮೇಲೆ ಆತ್ಮಾಹುತಿ ಬಾಂಬರ್ ತನ್ನ ಸ್ಫೋಟಕಗಳನ್ನು ತುಂಬಿದ ಕಾರನ್ನು ಸಿಆರ್‌ಪಿಎಫ್ ಬಸ್‌ಗೆ ನುಗ್ಗಿಸಿದ ಪರಿಣಾಮ 40 ಮಂದಿ ಸಿಬ್ಬಂದಿ ಹತಾತ್ಮರಾಗಿದ್ದರು.
ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್ ದಾಳಿಕೋರನ ವೀಡಿಯೊವನ್ನು ಬಿಡುಗಡೆ ಮಾಡಿ, ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡಿತ್ತು.
ವಿಶೇಷ ಎನ್‌ಐಎ ನ್ಯಾಯಾಧೀಶ ಪರ್ವೀನ್ ಸಿಂಗ್ ಅವರು ಆರೋಪಿ ಯೂಸುಫ್ ಚೋಪನ್ ಗೆ 50,000 ರೂ.ಗಳ ಬಾಂಡ್ ಮತ್ತು ಷರತ್ತಿನೊಂದಿಗೆ ಜಾಮೀನು ನೀಡಿದರು. ಅಗತ್ಯವಿದ್ದಾಗ ಮತ್ತು ತನಿಖೆಗೆ ಸೇರಲು ನ್ಯಾಯಾಲಯವು ಆರೋಪಿಗೆ ನಿರ್ದೇಶನ ನೀಡಿತು.
ಯುಎನ್ಐ ಎಎಚ್ 2130
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..