Sunday, Mar 29 2020 | Time 00:14 Hrs(IST)
National Share

ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 13 ಕ್ಕೆ ಏರಿಕೆ

ನವದೆಹಲಿ, ಫೆ 25(ಯುಎನ್ಐ) ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಹೋರಾಟ ಹಿಂಸಾರೂಪಕ್ಕೆ ತಿರುಗಿದ್ದ ಪರಿಣಾಮ ಈಶಾನ್ಯ ದೆಹಲಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ.
ಈ ಘಟನೆಯಲ್ಲಿ 156 ಮಂದಿ ಪೊಲೀಸರು ಗಾಯಗೊಂಡಿದ್ದಾರೆ.ಪರಿಸ್ಥಿತಿ ನಿಯಂತ್ರಣದಲ್ಲಿದ್ದರು ಬಹಳ ಬಿಗುವಿನಿಂದ ಕೂಡಿದೆಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬೆಂಕಿ ಹಚ್ಚಿದ ಪ್ರಕರಣದ ಸಂಬಂಧ 11 ಎಫ್ ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು.
ಪರಿಸ್ಥಿತಿಯನ್ನು ಅಲಲೋಕಿಸಲು ಡ್ರೋಣ್ ಬಳಸಿಕೊಂಡಿದ್ದು, ಸಮಾಜಘಾತುಕ ಶಕ್ತಿಗಳಿಗೆ ಕಠಿಣ ಕ್ರಮದ ಎಚ್ಚರಿಕೆಯ ಸಂದೇಶವನ್ನುರವಾನಿಸಲಾಗಿದೆ .
ಹಿಂಸಾಚಾರ ಮತ್ತು ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ತಾಜಾ ಪರಿಸ್ಥಿತಿ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿ ಪೊಲೀಸ್ ಆಯುಕ್ತ ಅಮುಲ್ಯ ಪಟ್ನಾಯಕ್ ಮತ್ತು ಇತರ ರಾಜಕೀಯ ಮುಖಂಡರೊಂದಿಗೆ ಸಭೆ ನಡೆಸಿದರು.
ಅರವಿಂದ್ ಕೇಜ್ರಿವಾಲ್ ಜನತೆ ಶಾಂತಿಯನ್ನು ಕಾಪಾಡಿಕೊಂಡು ಬರುವಂತೆ ಮನವಿ ಮಾಡಿದರು . ನಾಳೆ ಗಲಭೆ ಪ್ರದೇಶದ ಖಾಸಗಿ ಮತ್ತು ಸರ್ಕಾರಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಯುಎನ್ಐ ಕೆಎಸ್ಆರ್ 2302
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..