Sunday, Mar 29 2020 | Time 00:13 Hrs(IST)
National Share

ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ

ದೆಹಲಿ ಗಲಭೆ,  ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ

ನವದೆಹಲಿ, ಫೆ 26 (ಯುಎನ್ಐ) ಪೌರತ್ವ ತಿದ್ದುಪಡಿ, ಪರ- ವಿರೋಧಿ ಗಲಭೆ, ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ ಈಗ, ಬುಧವಾರ 17 ಕ್ಕೆ ಏರಿಕೆಯಾಗಿದೆ ಎಂದು ಜಿಟಿಬಿ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ, ದೆಹಲಿಯಲ್ಲಿ ಅದೂ ಅಮೆರಿಕ ಟ್ರಂಪ್ ಹಾಜರಿರುವ ಸಮಯದಲ್ಲಿ ವ್ಯಾಪಕ ಹಿಂಸಾಚಾರ ಜರುಗಿತ್ತು , ಅಂಗಡಿಗಳಿಗೆ ಬೆಂಕಿ ಹಚ್ಚುವುದು ಮತ್ತು ಲೂಟಿ ಮಾಡುವುದು, ಕಲ್ಲುಗಳನ್ನು ಹೊಡೆಯುವುದು ಮತ್ತು ಜನರನ್ನು ಥಳಿಸುವುದು ನಿರಂತರವಾಗಿ ನಡೆದಿತ್ತು.

ಚಂದ್ ಬಾಗ್, ಭಜನ್‌ಪುರ, ಗೋಕುಲ್‌ಪುರಿ, ಮೌಜ್‌ಪುರ, ಕಾರ್ಡಂಪುರಿ ಮತ್ತು ಜಾಫ್ರಾಬಾದ್‌ನಂತಹ ಪ್ರದೇಶಗಳು ಸಿಎಎ ಪರ ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರ ನಡುವೆ ಕದನಕ್ಕೆ ಸಾಕ್ಷಿಯಾಗಿತ್ತು.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭೇಟಿಯನ್ನು ಗಮನದಲ್ಲಿಟ್ಟುಕೊಂಡು ನಗರದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದರೂ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಸಿಎಎ ಪರವಾಗಿ ಸಭೆ ಕರೆದ ನಂತರ ಭಾನುವಾರದಿಂದಲೇ ಹಿಂಸಾಚಾರ ತೀವ್ರಗೊಂಡಿತ್ತು.

ಹಿಂಸಾಚಾರಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿಯ ಮನವಿಗಳ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ಮತ್ತು ದೆಹಲಿ ಹೈಕೋರ್ಟ್ ನಲ್ಲಿ ನಡೆಯಲಿದೆ.

ಯುಎನ್ಐ ಕೆಎಸ್ಆರ್ 0956

More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..