Wednesday, Feb 26 2020 | Time 09:51 Hrs(IST)
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
Election Share

ದೆಹಲಿ ಚುನಾವಣೆ; ಎಎಪಿಯಿಂದ 10 ಅಂಶಗಳ ಗ್ಯಾರಂಟಿ ಕಾರ್ಡ್ ಬಿಡುಗಡೆ

ನವದೆಹಲಿ, ಜ 19 (ಯುಎನ್ಐ) ದೆಹಲಿ ಚುನಾವಣೆಯ ಪ್ರಚಾರ ಕಾವೇರಿದ್ದು, ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರು ಮತ್ತೆ ಅಧಿಕಾರಕ್ಕೆ ಬಂದಲ್ಲಿ ಜನರಿಗೆ 24 ಗಂಟೆಗಳ ಶುದ್ಧ ನೀರು ಪೂರೈಕೆ, ಗುಣಮಟ್ಟದ ಶಿಕ್ಷಣ, ಮಾಲಿನ್ಯ ನಿಯಂತ್ರಣ ಮತ್ತು ಮಹಿಳೆಯರ ಸುರಕ್ಷತೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಭಾನುವಾರ 10 ಅಂಶಗಳನ್ನು ಒಳಗೊಂಡ 'ಕೇಜ್ರೀವಾಲ್ ಗ್ಯಾರಂಟಿ ಕಾರ್ಡ್ ' ಬಿಡುಗಡೆಗೊಳಿಸಿದ ಅವರು, ವಿಶ್ವದಲ್ಲಿ ಅನಿಯಮಿತ ವಿದ್ಯುತ್ ಪೂರೈಕೆಯಿರುವ ಒಂದೇ ನಗರವೆಂದರೆ ಅದು ದೆಹಲಿ. ಮುಂದಿನ ಐದು ವರ್ಷಗಳಲ್ಲಿ ಅನಿಯಮಿತ ವಿದ್ಯುತ್ ಪೂರೈಕೆಯನ್ನೂ ಜಾರಿಗೊಳಿಸಲಾಗುವುದು ಎಂಬುದು ನನ್ನ ಗ್ಯಾರಂಟಿ. ನಾನು ಅಧಿಕಾರದಲ್ಲಿರುವವರೆಗೂ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ಪೂರೈಕೆ ಯೋಜನೆ ಜಾರಿಯಲ್ಲಿರುತ್ತದೆ ಎಂದರು.
ಸರ್ಕಾರದ ಉಚಿತ ಯೋಜನೆಗಳು ಮಾ. 31ರ ನಂತರ ಜಾರಿಯಲ್ಲಿರುವುದಿಲ್ಲ ಎಂದು ವಿಪಕ್ಷಗಳು ಸುಳ್ಳು ಸುದ್ದಿ ಹರಡಿಸುತ್ತಿವೆ. ಪ್ರತಿ ಮನೆಗೂ ದಿನ 24 ಗಂಟೆಗಳ ಕಾಲ ಉಚಿತ ವಿದ್ಯುತ್ ಪೂರೈಎಕ ಮಾಡಲಾಗುವುದು ಎಂದರು.
ದೆಹಲಿಯ ಜನಿಸಿದ ಪ್ರತಿ ಮಗುವಿಗೂ ಪದವಿ ಪೂರೈಸುವರೆಗೆ ವಿಶ್ವದರ್ಜೆಯ ಶಿಕ್ಷಣ ನೀಡಲಾಗುವುದು. ಮುಂದಿನ ಐದು ವರ್ಷಗಳಲ್ಲಿ ಇನ್ನಷ್ಟು ಶಾಲೆಗಳನ್ನು ನಿರ್ಮಿಸುವುದೂ ಸೇರಿದಂತೆ 10 ಭರವಸೆಗಳನ್ನು ಕೇಜ್ರೀವಾಲ್ ಜನರ ಮುಂದಿಟ್ಟರು.
ಯುಎನ್ಐ ಎಸ್ಎಚ್ 1847