Wednesday, Feb 26 2020 | Time 10:46 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
Election Share

ದೆಹಲಿ ಚುನಾವಣೆ; ಕಾಂಗ್ರೆಸ್ ನಿಂದ ಪ್ರಚಾರ ಗೀತೆ ಬಿಡುಗಡೆ

ನವದೆಹಲಿ, ಜ 17 (ಯುಎನ್ಐ) ದೆಹಲಿ ವಿಧಾನಸಭಾ ಚುನಾವಣಾ ಪ್ರಚಾರ ರಂಗೇರಿದ್ದು, ಕಾಂಗ್ರೆಸ್ ಪಕ್ಷ ಹೊಸದಾಗಿ ಪ್ರಚಾರ ಗೀತೆ ಬಿಡುಗಡೆಗೊಳಿಸಿದೆ.
"ಫಿರ್ ಸೆ ಕಾಂಗ್ರೆಸ್ ವಾಲಿ ದೆಹಲಿ " ಎಂಬ ಸಾಲುಗಳನ್ನೊಳಗೊಂಡ ಈ ಪ್ರಚಾರ ಗೀತೆಯನ್ನು ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುಭಾಷ್ ಚೋಪ್ರಾ, ದೆಹಲಿ ಘಟಕದ ಮುಖ್ಯ ವಕ್ತಾರ ಮುಖೇಶ್ ಶರ್ಮಾ, ಸಾಮಾಜಿಕ ಮಾಧ್ಯಮ ಘಟಕದ ಅಧ್ಯಕ್ಷ ರೋಹನ್ ಗುಪ್ತಾ ಮತ್ತು ದೆಹಲಿ ಪ್ರಚಾರ ಸಮಿತಿ ಅಧ್ಯಕ್ಷ ಕೀರ್ತಿ ಜಾ ಆಜಾದ್ ಬಿಡುಗಡೆಗೊಳಿಸಿದರು.
ಈ ಗೀತೆ ದೆಹಲಿಯ ಜನತೆಗೆ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ನೇತೃತ್ವದಲ್ಲಿ ಪಕ್ಷದ 15 ವರ್ಷಗಳ ಕೆಲಸವನ್ನು ನೆನಪಿಸಲಿದೆ.
ಫೆ. 8ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಇನ್ನೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿಲ್ಲ.
2015ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನು ಕೂಡ ಗೆಲ್ಲಲು ಸಾಧ್ಯವಾಗಿರಲಿಲ್ಲ.
ಯುಎನ್ಐ ಎಸ್ಎಚ್ 1758