Wednesday, Feb 26 2020 | Time 10:29 Hrs(IST)
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
 • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
 • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ದೆಹಲಿ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ ಸಿಇಸಿ ಸಭೆಯಲ್ಲಿ ಮೋದಿ ಶಾ ಭಾಗಿ

ನವದೆಹಲಿ, ಜ 16 (ಯುಎನ್‌ಐ) ದೆಹಲಿ ವಿಧಾನಸಭೆಗೆ ಫೆಬ್ರವರಿ 8 ರಂದು ನಡೆಯಲಿರುವ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಗುರುವಾರ ಸಂಜೆ ಇಲ್ಲಿ ಸಭೆ ನಡೆಸಿತು.


ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮುಖ್ಯಸ್ಥ ಅಮಿತ್ ಶಾ, ಕಾರ್ಯಕಾರಿ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ಹಿರಿಯ ನಾಯಕರಾದ ರಾಜನಾಥ್ ಸಿಂಗ್, ಶಿವರಾಜ್ ಸಿಂಗ್ ಚೌಹಾನ್ ಮತ್ತು ನಿತಿನ್ ಗಡ್ಕರಿ ಭಾಗವಹಿಸಿದ್ದರು.


70 ಸದಸ್ಯರ ದೆಹಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ ಮಂಗಳವಾರ ತನ್ನ ಎಲ್ಲ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು.


ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಮೂರು ವಿಧಾನಸಭಾ ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿಯಿಂದ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರ ಕಸಿಯಲು ಶತಪ್ರಯತ್ನ ನಡೆಸಿದೆ.

ಸಿಎಎ ವಿರುದ್ಧದ ಪ್ರತಿಭಟನೆ, ಜೆಎನ್‌ಯು ಮತ್ತು ಜಾಮಿಯಾ ಮಿಲಿಯಾ ಕ್ಯಾಂಪಸ್‌ಗಳಲ್ಲಿನ ಹಿಂಸಾಚಾರ ಮೊದಲಾದ ವಿಚಾರಗಳಿಂದಾಗಿ ದೆಹಲಿ ಚುನಾವಣೆಯ ಮಹತ್ವ ಅನೇಕ ಪಟ್ಟು ಹೆಚ್ಚಾಗಿದೆ.

2019 ರ ಸಂಸತ್ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಏಳು ಸ್ಥಾನಗಳನ್ನು ಗೆದ್ದಿದೆ. ದಿವಂಗತ ಸುಷ್ಮಾ ಸ್ವರಾಜ್ ಮುಖ್ಯಮಂತ್ರಿಯಾಗಿದ್ದ 1998 ರ ನವೆಂಬರ್‌ ನಂತರ ಕೇಸರಿ ಪಕ್ಷಕ್ಕೆ ದೆಹಲಿಯಲ್ಲಿ ಅಧಿಕಾರ ಪಡೆಯಲು ಸಾಧ್ಯವಾಗಿಲ್ಲ.

ಯುಎನ್ಐ ಜಿಎಸ್ಆರ್ 2335