Friday, Feb 28 2020 | Time 09:30 Hrs(IST)
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ದೆಹಲಿ ಚುನಾವಣೆ: 8 ಮಂದಿ ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಎಎಪಿ

ನವದೆಹಲಿ, ಜ.14 (ಯುಎನ್‌ಐ) ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಎಲ್ಲಾ 70 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಇದರಲ್ಲಿ ಎಂಟು ಮಹಿಳಾ ಸ್ಪರ್ಧಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಸಿಖ್ ಸಮುದಾಯದ ಇಬ್ಬರು, ಇತರ ಐವರು ಮುಸ್ಲಿಮ್ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಾಗಿದ್ದಾರೆ.
ಈ ಬಾರಿ ಸುಮಾರು 15 ಅಭ್ಯರ್ಥಿಗಳಿಗೆ ಅವಕಾಶ ನಿರಾಕರಿಸಲಾಗಿದೆ. ಹಾಲಿ 46 ಶಾಸಕರನ್ನು ಉಳಿಸಿಕೊಳ್ಳಲಾಗಿದೆ.
ಈ ಮಧ್ಯೆ, ಇತ್ತೀಚೆಗೆ ಎಎಪಿಗೆ ಸೇರ್ಪಡೆಯಾದ ಶೋಯೆಬ್ ಇಕ್ಬಾಲ್‌ ಅವರಿಗೆ ದಾರಿ ಮಾಡಿಕೊಡಲು ಮಾಟಿಯಾ ಮಹಲ್‌ನ ಹಾಲಿ ಶಾಸಕ ಅಸಿಮ್ ಅಹ್ಮದ್ ಅವರನ್ನು ಕೈಬಿಡಲಾಗಿದ್ದು, ಮುಂಡ್ಕಾ ಕ್ಷೇತ್ರಕ್ಕೆ ಹೊಸ ಮುಖ ಧರಮ್ ಪಾಲ್ ಲಕ್ಡಾ ಅವರನ್ನು ಕಣಕ್ಕಿಳಿಸಲಾಗಿದೆ.
ಯುಎನ್ಐ ಎಎಚ್ 2140