Wednesday, Feb 26 2020 | Time 10:51 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ದೆಹಲಿ ಪಿರ್‍ಗರ್ಹಿ ಕಾರ್ಖಾನೆ ಅಗ್ನಿ ಅವಘಡ : 12 ಮಂದಿಗೆ ಗಾಯ

ನವದೆಹಲಿ, ಜ 012(ಯುಎನ್‍ಐ) ರಾಷ್ಟ್ರ ರಾಜಧಾನಿ ದೆಹಲಿಯ ಪಿರ್‍ಗರ್ಹಿ ಬ್ಯಾಟರಿ ಕಾರ್ಖಾನೆಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ 12 ಜನರು ಗಾಯಗೊಂಡಿದ್ದಾರೆ.

ಪಿರ್‍ಗರ್ಹಿಯ ಉದ್ಯೋಗ್ ನಗರದಲ್ಲಿನ ಬ್ಯಾಟರಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮುಂಜಾನೆ 4 ಗಂಟೆ ಸುಮಾರಿಗೆ ಕರೆ ಸ್ವೀಕರಿಸಿದ ನಂತರ 35 ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ, ಸ್ಫೋಟ ಸಂಭವಿಸಿದ್ದು, ಕಾರ್ಖಾನೆಯ ಕಟ್ಟಡ ಕುಸಿದಿದ್ದು, ಇದರಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ಹಲವು ಜನರು ಸಿಲುಕಿದ್ದರು. ಘಟನೆಯಲ್ಲಿ 11 ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ಒಟ್ಟು 12 ಜನರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದ್ದು, ಇಲ್ಲಿಯವರೆಗೆ ಯಾವುದೇ ಸವಿನ ವರದಿಯಾಗಿಲ್ಲ.

ಬೆಂಕಿ ಅವಘಡ ಸಂಭವಿಸಿದ್ದ ಫ್ಯಾಕ್ಟರಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ ಕಟ್ಟಡ ಕುಸಿದು ಬಿದ್ದು ಅನೇಕ ಅಗ್ನಿಶಾಮಕ ಸಿಬ್ಬಂದಿ ಅವಶೇಷಗಳಡಿ ಸಿಲುಕಿದ್ದರು.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘಟನೆ ಕುರಿತು ಟ್ವೀಟ್ ಮಾಡಿ, ಅಗ್ನಿಶಾಮಕ ಸಿಬ್ಬಂದಿ ಬಹಳ ಶ್ರಮಪಟ್ಟು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಟ್ಟಡಗಳಡಿ ಸಿಲುಕಿರುವವರು ಸುರಕ್ಷಿತವಾಗಿ ಹೊರಬರಲಿ ಎಂದೂ ಪ್ರಾರ್ಥಿಸುವುದಾಗಿ ತಿಳಿಸಿದ್ದರು.

ಯುಎನ್‍ಐ ಎಸ್‍ಎ ವಿಎನ್ 1336