Sunday, Mar 29 2020 | Time 00:39 Hrs(IST)
National Share

ದೆಹಲಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸಂಜೀವ್ ನಾಸಿಯಾರ್ ಎಎಪಿ ಸೇರ್ಪಡೆ

ನವದೆಹಲಿ, ಜ.15 (ಯುಎನ್‌ಐ) ದೆಹಲಿ ಬಾರ್ ಅಸೋಸಿಯೇಶನ್ ಅಧ್ಯಕ್ಷ ಸಂಜೀವ್ ನಾಸಿಯಾರ್ ಅವರನ್ನು ಬುಧವಾರ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪಕ್ಷಕ್ಕೆ ಸೇರಿಸಿಕೊಂಡರು.
ಸಂಜೀವ್ ಅವರು ದೆಹಲಿಯ ಬಿಜೆಪಿ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥರಾಗಿದ್ದರು.
ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿಯನ್ನು ವಿಜಯದತ್ತ ಕೊಂಡೊಯ್ಯಲು ನಾವು ಕಾನೂನು ಕ್ಷೇತ್ರದಲ್ಲಿರುವವರೊಂದಿಗೆ ಕೆಲಸ ಮಾಡುತ್ತೇವೆ. ದೆಹಲಿಯ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುವಲ್ಲಿ ವಕೀಲ ಸಮುದಾಯವು ಮುಂಚೂಣಿಯಲ್ಲಿದೆ ಎಂದು ನಾನು ಪ್ರಾಮಾಣಿಕವಾಗಿ ಭಾವಿಸುತ್ತೇನೆ. ದೆಹಲಿಯ ವಕೀಲ ಸಮುದಾಯದ ಪ್ರಗತಿಗಾಗಿ ನಾವು ಕೆಲಸ ಮಾಡುತ್ತೇವೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ದೆಹಲಿಯ ಬಾರ್ ಕೌನ್ಸಿಲ್ ಸದಸ್ಯ ಹಿಮಾಲ್ ಅಖ್ತರ್, ಹಿರಿಯ ವಕೀಲ ಸತೀಶ್ ಕುಮಾರ್ ಮತ್ತು ವಕೀಲರಾದ ಸೀಮಾ ಸಿಂಗ್ ಮತ್ತು ಮುಖೇಶ್ ದ್ರಾಲ್ ಕೂಡ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಪಕ್ಷ ಸೇರಿಕೊಂಡರು.
ಎಎಪಿ ಸರ್ಕಾರವು ವಕೀಲರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಮೊದಲ ಸರ್ಕಾರವಾಗಿದೆ. ನಾವು ಎಎಪಿ ಪರವಾಗಿ ನಿಲ್ಲುತ್ತೇವೆ ಮತ್ತು ರಾಜ್ಯದ ಅಭಿವೃದ್ಧಿಗೆ ನಾವು ಒಟ್ಟಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಭಾವಿಸುತ್ತೇವೆ ಎಂದು ಅಖ್ತರ್ ಹೇಳಿದರು.
70 ಸದಸ್ಯರ ದೆಹಲಿ ವಿಧಾನಸಭೆಗೆ ಫೆಬ್ರವರಿ 8 ರಂದು ಚುನಾವಣೆ ನಡೆಯಲಿದೆ.
ರಾಷ್ಟ್ರ ರಾಜಧಾನಿಯಲ್ಲಿ ವಿಧಾನಸಭೆ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದೆ. ಫೆಬ್ರವರಿ 11 ರಂದು ಮತ ಎಣಿಕೆ ನಡೆಯಲಿದೆ.
66 ಲಕ್ಷಕ್ಕೂ ಹೆಚ್ಚು ಮಹಿಳಾ ಮತದಾರರು ಸೇರಿದಂತೆ 1.47 ಕೋಟಿ ಮತದಾರರು ಫೆಬ್ರವರಿ 8 ರಂದು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಯುಎನ್ಐ ಎಎಚ್ 2045
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..