Wednesday, Feb 26 2020 | Time 10:06 Hrs(IST)
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
 • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
 • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ದೆಹಲಿ ಮತದಾರರನ್ನು ಸೆಳೆಯಲು ರಾಮಮಂದಿರ, ಸಿಎಎ ಮತ್ತು 370ನೇ ವಿಧಿ ಪ್ರಸ್ತಾಪಿಸಿದ ಅಮಿತ್ ಶಾ

ದೆಹಲಿ ಮತದಾರರನ್ನು ಸೆಳೆಯಲು ರಾಮಮಂದಿರ, ಸಿಎಎ ಮತ್ತು 370ನೇ ವಿಧಿ ಪ್ರಸ್ತಾಪಿಸಿದ ಅಮಿತ್ ಶಾ
ದೆಹಲಿ ಮತದಾರರನ್ನು ಸೆಳೆಯಲು ರಾಮಮಂದಿರ, ಸಿಎಎ ಮತ್ತು 370ನೇ ವಿಧಿ ಪ್ರಸ್ತಾಪಿಸಿದ ಅಮಿತ್ ಶಾ

ನವದೆಹಲಿ, ಜ5(ಯುಎನ್‍ಐ)- ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ನಡೆದ ಸಭೆಯೊಂದರಲ್ಲಿ ಪ್ರಮುಖ ವಿಷಯಗಳಾದ ರಾಮಮಂದಿರ, ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು 370ನೇ ವಿಧಿ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಭಾರತ ಕೋಟಿ ಕೋಟಿ ಜನರು ಮತ್ತು ವಿದೇಶದಲ್ಲಿನ ಕೋಟ್ಯಂತರ ಜನರು ಶ್ರೀರಾಮ ಜನ್ಮಸ್ಥಳ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕನಸು ಕಂಡಿದ್ದಾರೆ. ಎಂದು ಹೇಳಿದ್ದಾರೆ.

ಶನಿವಾರ ಇಲ್ಲಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ಕುರಿತಂತೆ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ನಾಯಕರು ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ 370ನೇ ವಿಧಿ ವಿರೋಧಿಸುತ್ತಿದ್ದಾರೆ ಎಂದು ಹೇಳಿದರು.

‘ಕೋಮು ಬಿಕ್ಕಟ್ಟು ಸೃಷ್ಟಿಸುವ ಮತ್ತು ಸುಳ್ಳು ಸುದ್ದಿ ಹಬ್ಬಿಸುವ ಸರ್ಕಾರ ನಿಮಗೆ ಅಗತ್ಯವಿದೆಯೇ ?’ ಎಂದು ಅಮಿತ್ ಶಾ ಕೇಳಿದಾಗ ಸಭೆಯಲ್ಲಿ ನೆರೆದಿದ್ದ ಕಾರ್ಯಕರ್ತರೆಲ್ಲರೂ ಬೇಡ, ಬೇಡ ಎಂದು ಹೇಳಿದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಟೀಕಿಸಿದ ಅಮಿತ್ ಶಾ, ಕಳೆದ ಐದು ವರ್ಷಗಳಲ್ಲಿ ದೆಹಲಿ ಜನತೆಗೆ ನಿಜವಾಗಿಯೂ ಮಾಡಿದ ಕೆಲಸಗಳ ಬಗ್ಗೆ ಆಮ್ ಆದ್ಮಿ ಪಕ್ಷದ ನಾಯಕರು ಜನರಿಗೆ ಹೇಳಬೇಕು. 20 ಕಾಲೇಜುಗಳನ್ನು, 5,000 ಶಾಲೆಗಳನ್ನು ಸ್ಥಾಪಿಸುವುದಾಗಿ ಕೇಜ್ರಿವಾಲ್ ಹೇಳಿದ್ದರು. ಇವುಗಳಲ್ಲಿ ಒಂದೂ ಸಹ ಸ್ಥಾಪನೆಯಾಗಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, 1984ರಲ್ಲಿ ಸಿಖ್ಬರ ವಿರುದ್ಧ ಹಿಂಸಾಚಾರ ನಡೆಸಿದ ಕಾಂಗ್ರೆಸ್, ಆ ಸಮುದಾಯದ ನೋವು ಅಳಿಸುವ ಯಾವುದೇ ಪ್ರಯತ್ನಕ್ಕೆ ಕೈ ಹಾಕಲಿಲ್ಲ. ನರೇಂದ್ರಮೋದಿ ಸರ್ಕಾರ ಗಲಭೆಗಳಲ್ಲಿನ ಸಂತ್ರಸ್ತರಿಗೆ ತಲಾ ಐದು ಲಕ್ಷ ಪರಿಹಾರವನ್ನು ನೀಡಿದೆ. ತಪ್ಪಿತಸ್ಥರನ್ನು ಜೈಲಿಗೆ ತಳ್ಳಿದೆ ಎಂದು ಹೇಳಿದರು.

ಪಾಕಿಸ್ತಾನದಲ್ಲಿ ಸಿಖ್ಖರ ಮೇಲೆ ನಡೆಯುತ್ತಿರುವ ದಾಳಿಗಳ ಬಗ್ಗೆ ಪ್ರಸ್ತಾಪಿಸಿದ ಅವರು, ಮೋದಿ ಸರ್ಕಾರ ಜಾರಿ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಉದ್ದೇಶ ಪ್ರಶ್ನಿಸುತ್ತಿರುವವರಿಗೆ ಇದು ಸ್ಪಷ್ಟ ನಿದರ್ಶನವಾಗಿದೆ ಎಂದು ಹೇಳಿದರು.

‘ಈಗ ಹೇಳಿ ಪಾಕಿಸ್ತಾನದಲ್ಲಿ ದಾಳಿಗಳಿಗೆ ಗುರಿಯಾಗಿರುವ ಸಿಖ್ಖರು ಎಲ್ಲಿಗೆ ಹೋಗಬೇಕು. ಅವರು ಭಾರತಕ್ಕೇ ಬರಬೇಕು.’ ಎಂದು ಅಮಿತ್ ಶಾ ಹೇಳಿದ್ದಾರೆ.

‘ಅಲ್ಪಸಂಖ್ಯಾತರಿಗೆ ಒಂದು ವಿಷಯವನ್ನು ಹೇಳಲು ಇಚ್ಛಿಸುತ್ತೇನೆ. ಪೌರತ್ವ ತಿದ್ದುಪಡಿ ಕಾಯ್ದೆಯು ಭಾರತದ ಯಾವುದೇ ಪ್ರಜೆಯ ಹಕ್ಕುಗಳನ್ನು ಕಸಿದುಕೊಳ್ಳುವುದಿಲ್ಲ. ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಸುಳ್ಳು ಮಾಹಿತಿ ಹಬ್ಬಿಸುತ್ತಿದ್ದಾರೆ. ಈ ಮೂಲಕ ಗಲಭೆಗಳನ್ನು ಪ್ರಚೋದಿಸುತ್ತಿದ್ದಾರೆ ಎಂದು ದೂರಿದರು.

ಯುಎನ್‍ಐ ಎಸ್‍ಎಲ್‍ಎಸ್ 1633