Wednesday, Feb 26 2020 | Time 10:08 Hrs(IST)
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
 • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
 • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ದೆಹಲಿಯಲ್ಲಿ ಹಿಂಸಾಚಾರಕ್ಕೆ ಕಾಂಗ್ರೆಸ್ , ಎಎಪಿ ಕುಮ್ಮಕ್ಕು : ಜಾವಡೇಕರ್

ನವದೆಹಲಿ, ಜ 1(ಯುಎನ್ಐ ) ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ದೆಹಲಿಯಲ್ಲಿ ಹಿಂಸಾಚಾರಕ್ಕೆ ಕಾಂಗ್ರೆಸ್ , ಎಎಪಿ ಪಾರ್ಟಿ ಕುಮ್ಮಕ್ಕು ನೀಡುತ್ತಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಬುಧವಾರ ವಾಗ್ದಾಳಿ ನಡೆಸಿದ್ದಾರೆ.
ದೆಹಲಿಯ ಜಾಮೀಯಾ ನಗರ್, ಸೀಲಂಪುರ್ ಮತ್ತು ಜಾಮ ಮಸೀದಿ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರವನ್ನು ಜನರು ಮರೆಯಲು ಸಾಧ್ಯವಿಲ್ಲ . ಜಾಮೀಯಾ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಅಸಿಬ್ ಖಾನ್ ಮತ್ತು ಆಮ್ ಆದ್ಮಿ ಪಕ್ಷದ ಅಮಾನತುಲ್ಲಾ ಉದ್ರೇಕಕಾರಿ ಭಾಷಣ ಮಾಡಿ ಗಲಭೆಗೆ ಪ್ರಚೋದನೆ ನೀಡಿದರು ಎಂದು ಅವರು ದೂರಿದರು.
ನಂತರ ಈ ತಪ್ಪು ಮಾಹಿತಿ ಎಲ್ಲೆಡೆ ಹರಡಿತ್ತು. ಕಾನೂನು ಜನರಿಗೆ ಪೌರತ್ವ ನೀಡಲಿದೆಯೋ ಹೊರತು ಎಂದಿಗೂ ಪೌರತ್ವವನ್ನು ಕಿತ್ತುಕೊಳ್ಳುವುದಿಲ್ಲ ಎಂದು ಸುದ್ದಿಗಾರರ ಜೊತೆ ಮಾತನಾಡುತ್ತಾ ಸ್ಪಷ್ಟಪಡಿಸಿದರು.
ದೇಶದ ಜನರಿಗೆ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಾರ್ಟಿಯ ಉದ್ದೇಶ ಏನು ಎಂಬುದು ತಿಳಿದಿದೆ. ಎರಡೂ ಪಕ್ಷಗಳೂ ಜನತೆಯ ಕ್ಷಮೆ ಕೋರಬೇಕು ಎಂದೂ ಜಾವಡೇಕರ್ ಒತ್ತಾಯಿಸಿದ್ದಾರೆ.
ನಾವು ಸತ್ಯ ಬಯಲಿಗೆಳೆಯುತ್ತೇವೆ. ಇದು ಅರಾಜಕತೆ ಮತ್ತು ಯಾರು ಸಿಎಎಯನ್ನು ವಿರೋಧಿಸುತ್ತಿದ್ದಾರೋ ಅವರ ನಡುವಿನ ಹೋರಾಟವಾಗಿದೆ. ನಮ್ಮ ಉದ್ದೇಶ , ಗುರಿ ದೆಹಲಿಯ ಅಭಿವೃದ್ಧಿಯ ಕಡೆಗೆ ಎಂದರು.
ಮಹಾನಗರ ಪಾಲಿಕೆಯ ಅಭಿವೃದ್ಧಿಯನ್ನು ಆಪ್ ಸರ್ಕಾರ ತಡೆದಿದೆ. ಕೇಂದ್ರ ನೀಡಿರುವ 900 ಕೋಟಿ ರೂಪಾಯಿ ಹಣವನ್ನು ಕೊಟ್ಟಿಲ್ಲ. 4, .5 ವರ್ಷಗಳ ಕಾಲ ಯಾವುದೇ ಅಭಿವೃದ್ಧಿ ಮಾಡದೆ ಇದೀಗ ಉಳಿದಿರುವ ಆರು ತಿಂಗಳಲ್ಲಿ ಚುನಾವಣಾ ಲಾಭಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಲು ಹೊರಟಿದೆ ಎಂದು ಟೀಕಿಸಿದರು.
ಕೆಲಸ ಮಾಡುವವರೆ ಬೇರೆ, ಲಾಭ ಪಡೆಯುವವರೇ ಬೇರೆ ಬಿಜೆಪಿ ಆಡಳಿತದ ಮಹಾನಗರ ಪಾಲಿಕೆ ಮಾಡಿರುವ ಅಭಿವೃದ್ಧಿಯ ಹೆಗ್ಗಳಿಕೆಯನ್ನು ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ತನ್ನದು ಹೇಳಿಕೊಳ್ಳಲು ಹೊರಟಿದೆ ಎಂದೂ ಪರೋಕ್ಷವಾಗಿ ತಿರುಗೇಟು ನೀಡಿದರು.
ಯುಎನ್ಐ ಕೆಎಸ್ಆರ್ 1712