Wednesday, Feb 26 2020 | Time 10:49 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ದೆಹಲಿ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಜಾರಿ: ನಾಮಪತ್ರ ಸಲ್ಲಿಕೆ ಆರಂಭ

ನವದೆಹಲಿ, ಜ 14 [ಯುಎನ್ಐ] ಬಹು ನಿರೀಕ್ಷಿತ, ದೇಶದ ಗಮನ ಸೆಳೆದಿರುವ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ಇಂದು ಅಧಿಸೂಚನೆ ಜಾರಿಯಾಗಿದ್ದು. ಈ ಮೂಲಕ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ.
ಆಮ್ ಆದ್ಮಿ ಪಾರ್ಟಿ,. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ತ್ರಿಕೋಣ ಹೋರಾಟಕ್ಕೆ ದೆಹಲಿ ಅಣಿಯಾಗುತ್ತಿದೆ. ಅಧಿಸೂಚನೆ ಪ್ರಕಾರ ಈ ತಿಂಗಳ ೨೧ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಮರುದಿನ ಉಮೇದುವಾರಿಕೆಯ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ೨೪ ಕಡೆಯ ದಿನವಾಗಿದೆ.
೭೦ ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ ೮ರಂದು ಚುನಾವಣೆ ನಡೆಯಲಿದ್ದು, ೧೧ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ದೆಹಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವಿಶೇಷ ಜಾಗೃತಿ ಅಭಿಯಾನ ಆಯೋಜಿಸಿದ್ದು, ಮತದಾರರಿಗೆ ಶಿಕ್ಷಣ ಜಾಗೃತಿ ಕಾರ್ಯಕ್ರಮಗಳು ಬಿರುಸುಗೊಂಡಿವೆ. ಮತದಾರರನ್ನು ಮತಗಟ್ಟೆಗೆ ಸೆಳೆಯಲು ನಾನಾ ರೀತಿಯ ಸ್ವೀಪ್ ಚಟುವಟಿಕೆಗಳು ನಡೆಯುತ್ತಿವೆ.
ಕಳೆದ ೨೦೧೫ರಲ್ಲಿ ನಡೆದ ವಿಧಾನಸಭೆಯಲ್ಲಿ ಆಮ್‌ಆದ್ಮಿ ಪಕ್ಷ ೬೭ ಕ್ಷೇತ್ರಗಳಲ್ಲಿ ಗೆದ್ದಿತ್ತು. ಬಿಜೆಪಿ ೩ ಸ್ಥಾನಗಳಲ್ಲಿ ಗೆಲುವು ಪಡೆದಿತ್ತು. ಕಾಂಗ್ರೆಸ್ ಯಾವುದೇ ಕ್ಷೇತ್ರದಲ್ಲೂ ಗೆಲುವು ಸಾಧಿಸಲು ಸಾಧ್ಯವಾಗಿರಲಿಲ್ಲ.
ಯುಎನ್ಐ ವಿಎನ್ 0951