Friday, Feb 28 2020 | Time 09:35 Hrs(IST)
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪೂರ್ಣ ಬಹುಮತ ಸಿಗಲಿದೆ : ಜಾವಡೇಕರ್

ನವದೆಹಲಿ, ಜ 11 (ಯುಎನ್ಐ) : ಫೆಬ್ರವರಿ 8 ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಮತ್ತು ಬಿಜೆಪಿಯ ದೆಹಲಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೆಹಲಿಯ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಚುನಾವಣಾ ಸಮಿತಿಯ ಮೊದಲ ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕೆ ಸಂಪೂರ್ಣ ಬಹುಮತ ಸಿಗಲಿದೆ ಎಂದು ಹೇಳಿದರು. ವಿಧಾನಸಭಾ ಚುನಾವಣೆಯಲ್ಲಿ ದೀರ್ಘಕಾಲದ ನಂತರ ಬಿಜೆಪಿ ಗೆಲುವು ಸಾಧಿಸಲಿದೆ ಎಂದ ಅವರು, ಪ್ರಸ್ತುತ ದೆಹಲಿಯಲ್ಲಿ ಬಿಜೆಪಿ ಅಧಿಕಾರದಲ್ಲಿಲ್ಲದಿದ್ದರೂ ಅಲ್ಲಿಯ ಅಭಿವೃದ್ಧಿಗೆ ಇನ್ನೂ ಕೆಲಸ ಮಾಡುತ್ತಿದೆ ಎಂದರು.
ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಎಂಸಿಡಿ, ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರ ಒಟ್ಟಾಗಿ ರಾಷ್ಟ್ರದ ಅಭಿವೃದ್ಧಿಗೆ ಕೆಲಸ ಮಾಡಬಹುದಾಗಿದ್ದು ದೆಹಲಿಯ ಮತದಾರರಲ್ಲಿ ಬಿಜೆಪಿಗೆ ಮತ ಚಲಾಯಿಸುವಂತೆ ಮನವಿ ಮಾಡುವುದಾಗಿ ಹೇಳಿದರು.

ಬಿಜೆಪಿ ಕಾರ್ಯಕರ್ತರು ನಿಸ್ವಾರ್ಥವಾಗಿ ಸಮಾಜದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದು ಇದು ಅವರ ವಿಶೇಷತೆ ಎಂದರು. ಇತರೆ ಪಕ್ಷಗಳು ವಂಶಪಾರಂಪರ್ಯ ರಾಜಕೀಯ ನಡೆಸುತ್ತಿವೆ ಎಂದು ಆರೋಪಿಸಿದ ಅವರು, ಬಿಜೆಪಿ ಪ್ರಜಾಪ್ರಭುತ್ವ ರೀತಿಯಲ್ಲಿ ನಡೆಯುತ್ತದೆ ಎಂದು ಭರವಸೆ ನೀಡಿದರು. ಕಾರ್ಯಕರ್ತರ ಧ್ವನಿಯನ್ನು ಬಿಜೆಪಿ ಆಲಿಸುತ್ತದೆ, ಅವರಿಂದ ಸಲಹೆ ಪಡೆಯುತ್ತದೆ, ನಂತರವಷ್ಟೇ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಜಾವ್ಡೇಕರ್ ಹೇಳಿದರು.
ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 50 ಪ್ರಮುಖ ಬಿಜೆಪಿ ಕಾರ್ಯಕರ್ತರಿದ್ದು 70 ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 3500 ಕಾರ್ಯಕರ್ತರಿದ್ದಾರೆ . ಅವರುಗಳು ತಮ್ಮ ನೆಚ್ಚಿನ ಅಭ್ಯರ್ಥಿಯ ಹೆಸರನ್ನು ಸೂಚಿಸಿದ್ದು ಈಗ ಆ ಎಲ್ಲ ಹೆಸರುಗಳನ್ನು ಪರಿಗಣಿಸಿದ ನಂತರ ದೆಹಲಿ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಪ್ರಕಾಶ್ ಜಾವ್ಡೇಕರ್ ತಿಳಿಸಿದರು.
ಯುಎನ್ಐ ಜಿಎಸ್ಆರ್ 2154