Sunday, Mar 29 2020 | Time 00:32 Hrs(IST)
National Share

ದೆಹಲಿ ಹಿಂಸಾಚಾರಕ್ಕೆ ಕಾಂಗ್ರೆಸ್‌, ಎಎಪಿ ನಾಯಕರ ಹೇಳಿಕೆ ಕಾರಣ: ಬಿಜೆಪಿ ಆರೋಪ

ನವದೆಹಲಿ, ಫೆ. 28 (ಯುಎನ್‌ಐ) ಕಾಂಗ್ರೆಸ್ ಮತ್ತು ಎಎಪಿ, ರಾಷ್ಟ್ರ ರಾಜಧಾನಿಯಲ್ಲಿನ ಹಿಂಸಾಚಾರವನ್ನು "ರಾಜಕೀಯಗೊಳಿಸುತ್ತಿವೆ" ಎಂದು ಗುರುವಾರ ಆರೋಪಿಸಿರುವ ಬಿಜೆಪಿ, ಈ ಹಿಂಸಾತ್ಮಕ ಘರ್ಷಣೆಗೆ ಉಭಯ ಪಕ್ಷಗಳ ನಾಯಕರ ಪ್ರಚೋದನಕಾರಿ ಹೇಳಿಕೆಗಳೇ ಕಾರಣವೆಂದು ಆರೋಪಿಸಿದೆ.
ಇಂದಿಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಮತ್ತು ಬಿಜೆಪಿ ಮುಖಂಡ ಪ್ರಕಾಶ್ ಜಾವಡೇಕರ್ , ದೆಹಲಿ ಹಿಂಸಾಚಾರವನ್ನು ಕಾಂಗ್ರೆಸ್ ರಾಜಕೀಯಗೊಳಿಸುತ್ತಿದೆ. ಎಎಪಿ ಈ ವಿಷಯವನ್ನು ಕೋಮುವಾದೀಕರಿಸಿದೆ ಎಂದು ಆರೋಪಿಸಿದರು.
ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದರು.
ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆಯನ್ನು ತ್ವರಿತ ಗತಿಯಲ್ಲಿ ಮಾಡಲಾಗುವುದು ಎಂದು ಜಾವಡೇಕರ್ ಹೇಳಿದರು.
ಶಾಂತಿ ಸ್ಥಾಪಿಸಲು ಜನರೊಂದಿಗೆ ಮಾತುಕತೆ ನಡೆಸುವುದು ಪ್ರತಿಯೊಂದು ರಾಜಕೀಯ ಪಕ್ಷದ ಕರ್ತವ್ಯವಾಗಿದೆ ಎಂದ ಅವರು, ಸಿಎಎ ಅಂಗೀಕಾರದ ನಂತರ ಕಾಂಗ್ರೆಸ್ ಅಧ್ಯಕ್ಷರು ರಾಮಲೀಲಾ ಮೈದಾನದಲ್ಲಿ ಸಮಾವೇಶ ನಡೆಸಿದ್ದರು ಎಂದು ಅವರು ಹೇಳಿದರು.
ಹಿಂಸಾಚಾರದಲ್ಲಿ ಎಎಪಿ ನಾಯಕ ತಾಹಿರ್ ಹುಸೇನ್ ಪಾತ್ರದ ಬಗ್ಗೆ ಕಾಂಗ್ರೆಸ್ ನಾಯಕರ ಮೌನವನ್ನು ಪ್ರಶ್ನಿಸಿದ ಜಾವಡೇಕರ್, ಎಎಪಿ ನಾಯಕನ ಮನೆಯಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ ಎಂದು ದೂರಿದರು.
" ಸಂಘಟಿತ ಮೌನವಿದೆ" ಎಂದು ಜಾವಡೇಕರ್ ಅವರು ದೆಹಲಿ ಹಿಂಸಾಚಾರದ ಬಗ್ಗೆ ಎಎಪಿ ಮತ್ತು ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದಾಗ ಹೇಳಿದರು.
ಕಾಂಗ್ರೆಸ್ ತನ್ನ ಜವಾಬ್ದಾರಿಯಿಂದ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಸಚಿವರು ದೂರಿದರು.
ಹಿಂಸಾಚಾರಕ್ಕೆ ಕಾಂಗ್ರೆಸ್ ಮತ್ತು ಎಎಪಿ ನಾಯಕರ ಹೇಳಿಕೆಗಳನ್ನು ದೂಷಿಸಿದ ಅವರು, '' ಇದು 2 ದಿನಗಳ ಹಿಂಸಾಚಾರವಲ್ಲ. ಇದು 2 ತಿಂಗಳ ಕಾಲ ಬಾಯ್ಲರ್ ಮೇಲೆ ಹಾಕಿದ ಮಡಕೆಯಾಗಿತ್ತು ಎಂದು ವಿಶ್ಲೇಷಿಸಿದರು.
ಈ ಹಿನ್ನೆಲೆಯಲ್ಲಿ ಅವರು ಇತ್ತೀಚೆಗೆ ರಾಮ್‌ಲೀಲಾ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹೇಳಿಕೆಗಳನ್ನು ಮತ್ತು ಪಕ್ಷದ ಮುಖಂಡ ರಾಹುಲ್ ಗಾಂಧಿಯವರ ಇತ್ತೀಚಿನ ಹೇಳಿಕೆಗಳನ್ನು ಉಲ್ಲೇಖಿಸಿ ಈ ಆರೋಪ ಮಾಡಿದರು.
ಕಾಂಗ್ರೆಸ್‌ ಈಗ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾಯಿಸುವುದು ಕಾಂಗ್ರೆಸ್‌ನ ಸಣ್ಣ ರಾಜಕೀಯವಾಗಿದೆ ಎಂದು ದೂಷಿಸಿದರು.
ಅಮಿತ್ ಶಾ ಅವರ ಪ್ರಯತ್ನದಿಂದಾಗಿ ಎರಡು ದಿನಗಳಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.
ಭಾನುವಾರದಿಂದ ಪೌರತ್ವ (ತಿದ್ದುಪಡಿ) ಕಾಯ್ದೆಯ (ಸಿಎಎ) ಬೆಂಬಲಿಗರು ಮತ್ತು ವಿರೋಧಿ ಪ್ರತಿಭಟನಕಾರರ ನಡುವೆ ಘರ್ಷಣೆ ನಡೆದ ಹಿನ್ನೆಲೆಯಲ್ಲಿ ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಟ್ಟು 106 ಜನರನ್ನು ಬಂಧಿಸಲಾಗಿದೆ ಮತ್ತು 18 ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಕಳೆದ 24 ಗಂಟೆಗಳಲ್ಲಿ ಯಾವುದೇ ಹಿಂಸಾಚಾರದ ಘಟನೆ ವರದಿಯಾಗಿಲ್ಲದಿದ್ದರೂ ಈಶಾನ್ಯ ದೆಹಲಿ ಘರ್ಷಣೆಯಲ್ಲಿ ಸಾವಿನ ಸಂಖ್ಯೆ ಬುಧವಾರ 34 ಕ್ಕೆ ಏರಿದೆ.
ಯುಎನ್ಐ ಎಎಚ್ 2103
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..