Sunday, Mar 29 2020 | Time 00:50 Hrs(IST)
National Share

ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು

ನವದೆಹಲಿ, ಫೆ.26 (ಯುಎನ್ಐ) ಹಿಂಸೆಗೆ ಪ್ರಚೋದನೆ ನೀಡುವ ಅಥವಾ ರಾಷ್ಟ್ರ ವಿರೋಧಿ ಮನೋಭಾವನೆಗೆ ಪ್ರಚೋದನೆ ನೀಡುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ಸುದ್ದಿಗಳನ್ನು ಪ್ರಸಾರ ಮಾಡದಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಎಲ್ಲಾ ಸ್ಯಾಟಲೈಟ್‌ ಖಾಸಗಿ ವಾಹಿನಿಗಳಿಗೆ ತಾಕೀತು ಮಾಡಿದೆ.
ಸಿಎಎ ಪರ ಹಾಗೂ ವಿರೋಧಿ ಪ್ರತಿಭಟನಾಕಾರರ ನಡುವೆ ದಿಲ್ಲಿಯಲ್ಲಿ ನಡೆದ ಘರ್ಷಣೆಯಿಂದ 13 ಮಂದಿ ಜೀವ ಕಳೆದುಕೊಂಡ ಹಿನ್ನೆಲೆಯಲ್ಲಿ ಈ ಸೂಚನೆಯನ್ನು ನೀಡಲಾಗಿದೆ.
"ಹಿಂಸೆಯನ್ನು ಪ್ರಚೋದಿಸುವ ಅಥವಾ ಕಾನೂನು ಹಾಗೂ ಸುವ್ಯವಸ್ಥೆಗೆ ವಿರುದ್ಧವಾದ ಅಥವಾ ರಾಷ್ಟ್ರವಿರೋಧಿ ಭಾವನೆಯನ್ನು ಪ್ರಚೋದಿಸುವ ಯಾವುದೇ ಸುದ್ದಿ ಅಥವಾ ದೃಶ್ಯಾವಳಿಯನ್ನು ಪ್ರಸಾರ ಮಾಡಬಾರದು" ಎಂದು ಸೂಚಿಸಲಾಗಿದೆ.
ಧಾರ್ಮಿಕ ಅಥವಾ ಸಮುದಾಯಗಳ ಮೇಲೆ ನಡೆಯುತ್ತಿರುವ ದಾಳಿ, ಧಾರ್ಮಿಕ ಗುಂಪುಗಳಲ್ಲಿ ದ್ವೇಷಭಾವನೆ ಹುಟ್ಟುಹಾಕುವ ದೃಶ್ಯ ಅಥವಾ ಮಾಹಿತಿ ಪ್ರಚಾರ ಮಾಡದಂತೆಯೂ ಸಲಹೆ ಮಾಡಲಾಗಿದೆ. ಮಾನಹಾನಿಕರ, ಉದ್ದೇಶಪೂರ್ವಕ, ಸುಳ್ಳು ಮತ್ತು ಅರ್ಧಸತ್ಯದ ಸುದ್ದಿಗಳನ್ನು ಪ್ರಸಾರ ಮಾಡದಂತೆಯೂ ಸೂಚಿಸಲಾಗಿದೆ.
ಕೇಬಲ್ ಟೆಲಿವಿಷನ್ ಜಾಲ (ನಿಯಂತ್ರಣ) ಕಾಯ್ದೆ- 1995ರಲ್ಲಿ ನಿರ್ದಿಷ್ಟಪಡಿಸಿದ ಕಾರ್ಯಕ್ರಮ ಹಾಗೂ ಜಾಹೀರಾತು ಸಂಹಿತೆಯನ್ನು ಉಲ್ಲಂಘಿಸುವ ಕಾರ್ಯಕ್ರಮ ಪ್ರಸಾರ ಮಾಡಬಾರದು. ಎಲ್ಲ ಟಿವಿ ಚಾನಲ್‌ಗಳು ಇದಕ್ಕೆ ಕಟ್ಟುನಿಟ್ಟಾಗಿ ಬದ್ಧರಾಗಿರಬೇಕು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.
ಯುಎನ್ಐ ಎಎಚ್ 0954
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..