Monday, Jun 1 2020 | Time 01:32 Hrs(IST)
Karnataka Share

ಧಾರವಾಡ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ಕು ಜನರಲ್ಲಿ ಕೋವಿಡ್-19 ಪ್ರಕರಣ

ಧಾರವಾಡ ಮೇ.23 (ಯುಎನ್ಐ)- ಧಾರವಾಡದ ಜಿಲ್ಲೆಯಲ್ಲಿ ಇಂದು ಸಂಜೆ ನಾಲ್ಕು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.

ಪೀಡಿತ-1942 (29 ವರ್ಷ ,ಮಹಿಳೆ)

ಪೀಡಿತ - 1943 ( 58 ವರ್ಷ ,ಪುರುಷ)

ಪೀಡಿತ -1944 ( 02 ವರ್ಷ, ಗಂಡು ಮಗು)

ಪೀಡಿತ - 1945 ( 49 ವರ್ಷ, ಮಹಿಳೆ)

ಇವರೆಲ್ಲರೂ ಮಹಾರಾಷ್ಟ್ರ ರಾಜ್ಯದಿಂದ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಇವರು ಜಿಲ್ಲೆಗೆ ಬಂದ ಕೂಡಲೇ ಗಂಟಲು ದ್ರವ ಪರೀಕ್ಷೆಗೊಳಪಡಿಸಿ, ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 38 ಕ್ಕೆ ಏರಿಕೆಯಾಗಿದೆ.

ಈಗಾಗಲೇ 10 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯುಎನ್ಐ ವಿಎನ್ಎಲ್ 1927