Wednesday, Feb 26 2020 | Time 09:52 Hrs(IST)
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
Karnataka Share

ನಜ್ಮಾ ಪೀರಜಾದೆಗೆ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ

ಬೆಳಗಾವಿ, ಜನವರಿ 24 (ಯುಎನ್ಐ) ಧಾರವಾಡ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕ ಹಾಗೂ ಪದನಿಮಿತ್ತ ಭೂದಾಖಲೆಗಳ ಉಪ ನಿರ್ದೇಶಕರಾಗಿ, ಗ್ರಾಮೀಣ ಜನರ ವಿಶೇಷವಾಗಿ ರೈತಸಮುದಾಯದ ಉನ್ನತಿಗೆ ಶ್ರಮಿಸಿದ ನಜ್ಮಾ ಎಂ.ಪೀರಜಾದೆ ಅವರಿಗೆ 2019 20ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಲಭಿಸಿದೆ.
ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಜ್ಮಾ ಪೀರಜಾದೆ , ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಲಂಬಾಣಿ ತಾಂಡಾ ಹಾಗೂ ಗೊಲ್ಲರ ಹಟ್ಟಿ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ, ಮೂಲಸೌಕರ್ಯ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಅದೇ ರೀತಿ ಇಲಾಖೆಯಿಂದ ಹಮ್ಮಿಕೊಳ್ಳಲಾದ ವಿವಿಧ ಜನಪರ ಯೋಜನೆಗಳಲ್ಲಿ ಸಕ್ರೀಯವಾಗಿ ತಮ್ಮನ್ನು ತೊಡಗಿಸಿಕೊಂಡು ಗ್ರಾಮೀಣ ಜನರ ಹಾಗೂ ವಿಶೇಷವಾಗಿ ರೈತಸಮುದಾಯದ ಮೆಚ್ಚುಗೆಗೂ ಪಾತ್ರರಾಗಿದ್ದರು.
ಇವರ ಜನಪರ, ಮಾನವೀಯ ಸೇವೆ ಪರಿಗಣಿಸಿ ರಾಜ್ಯಮಟ್ಟದ ಸೇವಾ ಸರ್ವೋತ್ತಮ ಪ್ರಶಸ್ತಿ ನೀಡುವಂತೆ ಭೂಮಾಪನ ಇಲಾಖೆಯ ಆಯುಕ್ತರು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು.
ಪೀರಜಾದೆ ಅವರ ಅತ್ಯುನ್ನತ ಸೇವೆಯನ್ನು ಪರಿಗಣಿಸಿ ಸೇವಾ ಸರ್ವೋತ್ತಮ ಪ್ರಶಸ್ತಿಯನ್ನು ಸರ್ಕಾರ ನೀಡಿದೆ. ಪ್ರಶಸ್ತಿ25 ಸಾವಿರ ರೂಪಾಯಿ ಪ್ರೋತ್ಸಾಹಧನ ಮತ್ತು ಪ್ರಮಾಣಪತ್ರ ಒಳಗೊಂಡಿರುತ್ತದೆ.
ಯುಎನ್ಐ ಕೆಎಸ್ಆರ್ 2245