Sunday, Mar 29 2020 | Time 00:31 Hrs(IST)
National Share

ನಾಗಾಲ್ಯಾಂಡ್ ವಿಧಾನಸಭಾ ಸ್ಪೀಕರ್ ಯೊಶು ನಿಧನಕ್ಕೆ ಪ್ರಧಾನಿ ಸಂತಾಪ

ನವದೆಹಲಿ, ಡಿ 31(ಯುಎನ್‍ಐ)- ನಾಗಾಲ್ಯಾಂಡ್ ವಿಧಾನಸಭಾ ಸ್ಪೀಕರ್ ವಿಖೋ-ಒ ಯೊಶು ನಿಧನಕ್ಕೆ ಪ್ರಧಾನಿ ನರೇಂದ್ರಮೋದಿ ದಿಗ್ಭ್ರಮೆ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ 67 ವರ್ಷದ ಯೊಶು ಅವರು ಸೋಮವಾರ ನಿಧನ ಹೊಂದಿದ್ದರು. ಅವರು ಶ್ವಾಸಕೋಶ ಕ್ಯಾನ್ಸರ್‍ನಿಂದ ಬಳಲುತ್ತಿದ್ದರು.
‘ನಾಗಾಲ್ಯಾಂಡ್ ವಿಧಾನಸಭಾ ಸ್ಪೀಕರ್ ವಿಖೊ-ಒ-ಯೊಶು ಅವರ ನಿಧನ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ. ತುಂಬಾ ಬುದ್ದಿವಂತರಾಗಿದ್ದ ಯೊಶು ಅವರು ನಾಗಾಲ್ಯಾಂಡ್ ಪ್ರಗತಿಗಾಗಿ ತಮ್ಮ ಜೀವನವನ್ನೇ ಮುಡುಪಾಗಿರಿಸಿಕೊಂಡಿದ್ದರು. ಮೃತರ ಕುಟುಂಬದವರು ಮತ್ತು ಅವರ ಅನುಯಾಯಿಗಳಿಗೆ ದೇವರು ದುಖ: ಭರಿಸುವ ಶಕ್ತಿಯನ್ನು ನೀಡುವಂತಾಗಲಿ.’ ಎಂದು ಪ್ರಧಾನಿ ತಮ್ಮ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.
‘ಯೊಶು ಅವರ ಆತ್ಮಕ್ಕೆ ಶಾಂತಿ ಸಿಗಲಿ.’ ಎಂದು ಮೋದಿ ಪ್ರಾರ್ಥಿಸಿದ್ದಾರೆ.
ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೊಗ್ರೆಸಿವ್ ಪಾರ್ಟಿ(ಎನ್‍ಡಿಪಿಪಿ) ನಾಯಕರಾದ ಯೊಶೊ ಅವರು ದಕ್ಷಿಣ ಅಂಗಾಮಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಐಟಿ ಮತ್ತು ಟಿಇಗೆ ಸಲಹೆಗಾರರಾಗಿ, ಡೆಮಾಕ್ರಟಿಕ್ ಅಲಯೆನ್ಸ್ ಆಫ್ ನಾಗಾಲ್ಯಾಂಡ್ (ಡಿಎಎನ್)ನ ಅಧ್ಯಕ್ಷರಾಗಿ, ವಸತಿ, ಪಶುಸಂಗೋಪನೆಯ ಸಂಸದೀಯ ಕಾರ್ಯದರ್ಶಿಯಾಗಿ, 2018ರಿಂದ ರಾಜ್ಯ ವಿಧಾನಸಭೆಯ ಸ್ಪೀಕರ್ ಆಗಿ ಅನೇಕ ಉನ್ನತ ಹುದ್ದೆಗಳನ್ನು ಯೊಶು ನಿರ್ವಹಿಸಿದ್ದರು.
ಯುಎನ್‍ಐ ಎಸ್‍ಎಲ್‍ಎಸ್ 1238
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..