Wednesday, Feb 26 2020 | Time 10:36 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ನಿಮ್ಮ ಹಿತ್ತಲು ನೋಡಿ - ನಿಮ್ಮ ಮಿತ್ರರಾಷ್ಟ್ರಗಳು, ನಿಮ್ಮ ಸಿಎಂ ರಿಂದಲೇ ಸಿಎಎ ಗೆ ವಿರೋಧ : ಶಾ ಗೆ ಕಾಂಗ್ರೆಸ್ ಟಾಂಗ್

ನವದೆಹಲಿ, ಜ 3 (ಯುಎನ್ಐ) ಸೇವೆ ಮಾಡಲು ಜನರು ಮತ್ತು ಗೃಹ ಸಚಿವರನ್ನು ಆಯ್ಕೆ ಮಾಡಿದ್ದಾರೆ ಹೊರತು ವಿಪಕ್ಷಗಳನ್ನು ತೆಗಳಲು ಅಲ್ಲ ಎಂದು ರಾಹುಲ್ ಗಾಂಧಿ ಮತ್ತು ಇತರ ವಿರೋಧ ಪಕ್ಷದ ನಾಯಕರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.
"ಜನರು ನಿಮ್ಮನ್ನು ಮತ್ತು ನರೇಂದ್ರ ಮೋದಿಯವರನ್ನು ಗೃಹ ಸಚಿವರು ಮತ್ತು ಪ್ರಧಾನ ಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ, ಅವರಿಗೆ ಸೇವೆ ಸಲ್ಲಿಸಲು ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸಲು ಹೊರತು ವಿರೋಧ ಪಕ್ಷದ ನಾಯಕರನ್ನು ನಿಂದಿಸಲು ಅಲ್ಲ" ಎಂದು ಎಐಸಿಸಿ ಮಾಧ್ಯಮ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಇಟಾಲಿಯನ್ ಅನುವಾದವನ್ನು ರಾಹುಲ್ ಗಾಂಧಿಗೆ ಕಳುಹಿಸುವುದಾಗಿ ಜೋಧ್‌ಪುರದಲ್ಲಿ ಅಮಿತ್ ಶಾ ಹೇಳಿದ ಕೆಲವೇ ಗಂಟೆಗಳ ನಂತರ ಸುರ್ಜೆವಾಲಾ ಈ ಪ್ರತಿಕ್ರಿಯೆ ನೀಡಿದ್ದಾರೆ.

ಸರಣಿ ಟ್ವೀಟ್‌ಗಳಲ್ಲಿ ಅವರು, ಬಿಜೆಪಿಯ ಮಿತ್ರರಾಷ್ಟ್ರಗಳು ಮತ್ತು ಮುಖ್ಯಮಂತ್ರಿಗಳು ಸಹ ಸಿಎಎ ಅನ್ನು ವಿರೋಧಿಸುತ್ತಿದ್ದಾರೆ ಎಂದು ಉದಾಹರಿಸಿದ್ದಾರೆ.
"ನಿಮ್ಮ ಮಿತ್ರರಾಷ್ಟ್ರಗಳಿಗೆ ಈ ವಿಭಜಕ ಸಿಎಎ ಮೇಲೆ ನಂಬಿಕೆ ಇಲ್ಲ. ನಿಮ್ಮ ಪಕ್ಷದ ಮುಖ್ಯಮಂತ್ರಿಗಳೇ ಇದನ್ನು ವಿರೋಧಿಸುತ್ತಿದ್ದಾರೆ. ಆದ್ದರಿಂದ ವಿರೋಧ ಪಕ್ಷದ ನಾಯಕರನ್ನು ನಿಂದಿಸುವುದನ್ನು ನಿಲ್ಲಿಸಿ ಮತ್ತು ನಿಮ್ಮ ಹಿತ್ತಲಿನತ್ತ ನೋಡಿ" ಎಂದು ಸುರ್ಜೆವಾಲಾ ಕಿಡಿಕಾರಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ತಮ್ಮ ಟ್ವೀಟ್ ನಲ್ಲಿ, "ಅಸ್ಸಾಂನ ಮಗನಾಗಿ ನಾನು ಎಂದಿಗೂ ನನ್ನ ರಾಜ್ಯದಲ್ಲಿ ವಿದೇಶಿಯರು ನೆಲೆಸಲು ಅವಕಾಶ ನೀಡುವುದಿಲ್ಲ" ಎಂದು ಹೇಳಿರುವುದು ಇನ್ನಷ್ಟು ಕೋಲಾಹಲಕ್ಕೆ ಕಾರಣವಾಗಿದ್ದು ಬಿಜೆಪಿಯೇ ಸಿಎಎ ವಿರೋಧಿಸುತ್ತಿದೆ ಎಂಬುದನ್ನು ಸೂಚಿಸಿದೆ.

"ನಿಮ್ಮ ಪಕ್ಷದವರೇ ಆದ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರು ಸಿಎಎ ಸ್ವೀಕರಿಸಲು ನಿರಾಕರಿಸಿದ್ದಾರೆ. ಎನ್‌ಆರ್‌ಸಿ ಕುರಿತಂತೆ ಮೋದಿ ನಿಮ್ಮ ಮಾತುಗಳನ್ನು ತಿರಸ್ಕರಿಸಿದ್ದಾರೆ" ಎಂದು ಕಾಂಗ್ರೆಸ್ ಮುಖಂಡರು ವ್ಯಂಗ್ಯವಾಡಿದರು.

"ನೀವು ಏಕೆ ವಿರೋಧ ಪಕ್ಷ ಮತ್ತು ದೇಶದ ಮೇಲೆ ಕೋಪಗೊಳ್ಳುತ್ತಿದ್ದೀರಿ?" ಎಂದು ಗೃಹ ಸಚಿವರನ್ನು ಸುರ್ಜೆವಾಲಾ ಪ್ರಶ್ನಿಸಿದ್ದಾರೆ.
ಯುಎನ್ಐ ಜಿಎಸ್ಆರ್ 2251