Wednesday, Feb 26 2020 | Time 10:31 Hrs(IST)
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
 • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
 • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
Sports Share

ನ್ಯೂಜಿಲೆಂಡ್ ಅಬ್ಬರದ ಬ್ಯಾಟಿಂಗ್: ಭಾರತಕ್ಕೆ 204 ರನ್ ಕಠಿಣ ಗುರಿ

ಆಕ್ಲೆಂಡ್, ಜ 24 (ಯುಎನ್ಐ) ಕಾಲಿನ್ ಮನ್ರೊ, ಕೇನ್ ವಿಲಿಯಮ್ಸನ್ ಹಾಗೂ ರಾಸ್ ಟೇಲರ್ ಅವರ ಸ್ಪೋಟಕ ಅರ್ಧಶತಕಗಳ ನೆರವಿನಿಂದ ನ್ಯೂಜಿಲೆಂಡ್ ತಂಡ ಮೊದಲನೇ ಟಿ-20 ಪಂದ್ಯದಲ್ಲಿ ಭಾರತಕ್ಕೆ ಕಠಿಣ ಗುರಿ ನೀಡಿದೆ.
ಇಲ್ಲಿನ ಈಡನ್ ಪಾರ್ಕ್ ಅಂಗಳದಲ್ಲಿ ಟಾಸ್ ಗೆದ್ದು ಪೀಲ್ಡಿಂಗ್ ಆಯ್ದುಕೊಂಡ ವಿರಾಟ್ ಕೊಹ್ಲಿ ನಿರ್ಧಾರವನ್ನು ಕಿವೀಸ್ ಬ್ಯಾಟರ್ ಗಳು ತಲೆ ಕೆಳಗಾಗುವಂತೆ ಮಾಡಿದರು. ಅಲ್ಲದೆ, ಕೊಹ್ಲಿ ತೆಗೆದುಕೊಂಡ ನಿರ್ಧಾರಕ್ಕೆ ಬೌಲರ್ ಗಳು ಕೂಡ ಸಾಥ್ ನೀಡಲೇ ಇಲ್ಲ. ದ್ವೀಪ ರಾಷ್ಟ್ರದ ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ಅಬ್ಬರದ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್ ಗಳಿಗೆ ಐದು ವಿಕೆಟ್ ನಷ್ಟಕ್ಕೆ 203 ರನ್ ಗಳಿಸಿದ್ದು, ಕೊಹ್ಲಿ ಪಡೆಗೆ 204 ರನ್ ಕಠಿಣ ಗುರಿ ನೀಡಿದೆ.
ಆರಂಭಿಕರಾಗಿ ಕಣಕ್ಕೆ ಇಳಿದ ಮಾರ್ಟಿಕ್ ಗುಪ್ಟಿಲ್ ಹಾಗೂ ಕಾಲಿನ್ ಮನ್ರೊ ಜೋಡಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ತೋರಿತು. ಕೇವಲ 7.5 ಓವರ್ ಗಳಿಗೆ 80 ರನ್ ಗಳನ್ನು ಮೊದಲನೇ ವಿಕೆಟ್ ಚಚ್ಚುವ ಮೂಲಕ ಈ ಜೋಡಿ ತಂಡಕ್ಕೆ ಭರ್ಜರಿ ಆರಂಭ ನೀಡಿತು.
ಮಾರ್ಟಿನ್ ಗುಪ್ಟಿಲ್ 19 ಎಸೆತಗಳಲ್ಲಿ 30 ರನ್ ಗಳಿಸಿ ಶಿವಂ ದುಬೆಗೆ ವಿಕೆಟ್ ನೀಡಿದರು. ಅದ್ಭುತ ಬ್ಯಾಟಿಂಗ್ ಮಾಡಿದ ಕಾಲಿನ್ ಮನ್ರೊ 42 ಎಸೆತಗಳಲ್ಲಿ ಎರಡು ಸಿಕ್ಸರ್ ಆರು ಬೌಂಡರಿಯೊಂದಿಗೆ 59 ರನ್ ಚಚ್ಚಿ ಔಟ್ ಆದರು.
ನಾಯಕ ಕೇನ್ ವಿಲಿಯಮ್ಸನ್ ಕೂಡ ಸುಮ್ಮನೇ ಇರಲಿಲ್ಲ. ಕ್ರೀಸ್ ಬರುತ್ತಿದ್ದಂತೆ ಸ್ಫೋಟಕ ಬ್ಯಾಟಿಂಗ್ ಮಾಡಿದರು. ಕೇವಲ 26 ಎಸೆತಗಳಲ್ಲಿ 51 ರನ್ ಸಿಡಿಸಿ ತಂಡದ ಮೊತ್ತ 150ರ ಗಡಿ ದಾಟಿಸಿದರು. ಮಧ್ಯಮ ಕ್ರಮಾಂಕದಲ್ಲಿ ಭಾರತದ ಬೌಲರ್ ಗಳನ್ನು ನುಚ್ಚು ನೂರು ಮಾಡಿದ ರಾಸ್ ಟೇಲರ್ ಕೇವಲ 27 ಎಸೆತಗಳಲ್ಲಿ ಅಜೇಯ 54 ರನ್ ಗಳಿಸಿ ತಂಡದ ಮೊತ್ತ 200ರ ಗಡಿ ದಾಟಿಸಿದರು.
ಕಿವೀಸ್ ದಾಂಡಿಗರ ಅಬ್ಬರಕ್ಕೆ ಭಾರತದ ಬೌಲಿಂಗ್ ವಿಭಾಗ ಮಂಕಾಯಿತು. ಶಮಿ ಬಿಟ್ಟು ಇನ್ನುಳಿದವರು ಒಂದೊಂದು ವಿಕೆಟ್ ಪಡೆದರೂ ನ್ಯೂಜಿಲೆಂಡ್ ಎದುರು ದುಬಾರಿಯಾದರು.
ಸಂಕ್ಷಿಪ್ತ ಸ್ಕೋರ್
ನ್ಯೂಜಿಲೆಂಡ್: 20 ಓವರ್ ಗಳಿಗೆ 203/5 (ಕಾಲಿನ್ ಮನ್ರೊ 59, ಕೇನ್ ವಿಲಿಯಮ್ಸನ್ 51, ರಾಸ್ ಟೇಲರ್ ಔಟಾಗದೆ 54; ಶಿವಂ ದುಬೆ 24 ಕ್ಕೆ 2, ಯಜ್ವೇಂದ್ರ ಚಾಹಲ್ 32 ಕ್ಕೆ 1)
ಯುಎನ್ಐ ಆರ್ ಕೆ 1416
More News

ಮಾರ್ಚ 2ರಿಂದ ಚೆನ್ನೈ ಅಭ್ಯಾಸ

25 Feb 2020 | 7:24 PM

 Sharesee more..

ಏಷ್ಯಾ, ವಿಶ್ವ ಇಲೆವೆನ್ ತಂಡ ಪ್ರಕಟ

25 Feb 2020 | 7:23 PM

 Sharesee more..
ರನ್ ಹೊಳೆ ಹರಿಸಿದರೂ ಟೆಸ್ಟ್‌ನಲ್ಲಿ ರಾಹುಲ್‌ಗೆ ಅವಕಾಶವಿಲ್ಲ ಏಕೆ ? : ಕಪಿಲ್ ದೇವ್

ರನ್ ಹೊಳೆ ಹರಿಸಿದರೂ ಟೆಸ್ಟ್‌ನಲ್ಲಿ ರಾಹುಲ್‌ಗೆ ಅವಕಾಶವಿಲ್ಲ ಏಕೆ ? : ಕಪಿಲ್ ದೇವ್

25 Feb 2020 | 7:03 PM

ನವದೆಹಲಿ, ಫೆ 25 (ಯುಎನ್ಐ) ಸೀಮಿತ ಓವರ್‌ಗಳ ಸ್ವರೂಪದಲ್ಲಿ ಅತ್ಯದ್ಭುತ ಪ್ರದರ್ಶನದ ಹೊರತಾಗಿಯೂ ನ್ಯೂಜಿಲೆಂಡ್ ವಿರುದ್ಧ ಪ್ರಸ್ತುತ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಕೆ.ಎಲ್ ರಾಹುಲ್ ಅವರನ್ನು ಕೈ ಬಿಟ್ಟಿರುವುದನ್ನು ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರು ತೀವ್ರವಾಗಿ ಖಂಡಿಸಿದ್ದಾರೆ.

 Sharesee more..