Sunday, Mar 29 2020 | Time 00:50 Hrs(IST)
National Share

ನಿರ್ಭಯಾ ಅಪರಾಧಿಯ ಕೊನೆಯ ಪ್ರಯತ್ನ; ಸುಪ್ರೀಂಗೆ ಮತ್ತೊಂದು ಅರ್ಜಿ

ನವದೆಹಲಿ, ಜ 18 (ಯುಎನ್ಐ) ನಿರ್ಭಯಾ ಪ್ರಕರಣ ನಡೆದ ಸಂದರ್ಭದಲ್ಲಿ ತಾನು ಅಪ್ರಾಪ್ತನಾಗಿದ್ದೆ, ಈ ವಿಷಯವನ್ನು ದೆಹಲಿ ನ್ಯಾಯಾಲಯ ಪರಿಗಣಿಸಿಲ್ಲ ಎಂದು ಆರೋಪಿಸಿ ಸಜಾಬಂಧಿಗಳಲ್ಲಿ ಒಬ್ಬನಾದ ಪವನ್ ಕುಮಾರ್ ಗುಪ್ತಾ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
2012ರ ಡಿಸೆಂಬರ್ 16ರಂದು ಗಲ್ಲುಶಿಕ್ಷೆಗೆ ಗುರಿಯಾಗಿರುವ ಪವನ್ ಗುಪ್ತಾ(23) ಶುಕ್ರವಾರ ಶಿಕ್ಷೆಯ ರದ್ದತಿ ಕೋರಿ ಶುಕ್ರವಾರ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಈ ಅರ್ಜಿಯನ್ನು ನ್ಯಾಯಮೂರ್ತಿ ಆರ್. ಭಾನುಮತಿ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಲಿದೆ.
ದಕ್ಷಿಣ ದೆಹಲಿಯಲ್ಲಿ 21 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಚಲಿಸುತ್ತಿದ್ದ ಬಸ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಪವನ್ ಜೊತೆಗೆ ಇನ್ನೂ ಮೂವರಿಗೆ ಗಲ್ಲುಶಿಕ್ಷೆ ವಿಧಿಸಲಾಗಿದೆ.
ಯುಎನ್ಐ ಎಸ್ಎಚ್ 2052
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..