Friday, Feb 28 2020 | Time 09:36 Hrs(IST)
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ನಿರ್ಭಯಾ ಪ್ರಕರಣ : ಕ್ಷಮಾದಾನ ಅರ್ಜಿ ತಿರಸ್ಕರಿಸಲು ಕೇಂದ್ರ ಶಿಫಾರಸ್

ನವದೆಹಲಿ, ಜನವರಿ 17 (ಯುಎನ್ಐ ) ನಿರ್ಭಯಾ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅತ್ಯಾಚಾರಿಗಳ ಪೈಕಿ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಿಕೊಡಲಾಗಿದ್ದರೂ ಇದನ್ನು ತಿರಸ್ಕರಿಸುವಂತೆ ಕೇಂದ್ರ ಗೃಹ ಸಚಿವಾಲಯ ಶಿಫಾರಸ್ ಸಹ ಮಾಡಿದೆ.
ಮುಕೇಶ್ ಸಿಂಗ್ ಕೆಲ ದಿನಗಳ ಹಿಂದೆ ತನಗೆ ಕ್ಷಮಾದಾನ ನೀಡುವಂತೆ ಮನವಿ ಮಾಡಿಕೊಂಡಿದ್ದ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಗುರುವಾರ ಈ ಮನವಿಯನ್ನು ಗೃಹ ಸಚಿವಾಲಯಕ್ಕೆ ರವಾನಿಸಿ ಮನವಿ ತಿರಸ್ಕರಿಸುವಂತೆ ಶಿಫಾರಸು ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
2012ರಲ್ಲಿ ದೆಹಲಿಯಲ್ಲಿ ಆರು ಮಂದಿ ಸೇರಿ ನಿರ್ಭಯಾ(ಹೆಸರು ಬದಲಿಸಲಾಗಿದೆ) ಮೇಲೆ ಅಮಾನುಷ ರೀತಿಯಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಕೆಲ ದಿನಗಳ ಜೀವನ್ಮರಣ ಹೋರಾಟದ ಬಳಿಕ ಆಕೆ ದೂರದ ಸಿಂಗಾಪುರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಎಲ್ಲಾ 6 ಮಂದಿಯನ್ನು ಬಂಧಿಸಿದ್ದರೂ ಒಬ್ಬ ಬಾಲಾಪರಾಧಿ ಎಂಬ ಕಾರಣಕ್ಕೆ ಆತನಿಗೆ ಬಾಲಾಪರಾಧ ನಿಯಮದ ಪ್ರಕಾರ ಶಿಕ್ಷೆಯಾಗಿ ಹೊರ ಬಂದಿದ್ದಾನೆ. ರಾಮ್ ಸಿಂಗ್ ಎಂಬ ಪ್ರಮುಖ ಆರೋಪಿಯು ತಿಹಾರ್ ಜೈಲಿನಲ್ಲೇ ನೇಣಿಗೆ ಶರಣಾಗಿದ್ದ. ಉಳಿದ ನಾಲ್ವರಿಗೆ ಮರಣದಂಡನೆ ಶಿಕ್ಷೆಯಾಗಿದೆ. ಆದರೆ, ಮೇಲ್ಮನವಿ, ಕ್ಷಮಾದಾನ ಅರ್ಜಿಗಳ ಕಾರಣದಿಂದಾಗಿ ಅವರನ್ನು ಗಲ್ಲಿಗೇರಿಸುವುದು ತಡವಾಗುತ್ತಿದೆ.
ದೆಹಲಿ ಹೈಕೋರ್ಟ್ ಈ ನಾಲ್ವರಿಗೆ ಈಗಾಗಲೇ ಡೆತ್ ವಾರೆಂಟ್ ಹೊರಡಿಸಿ ಇದೇ 22ರಂದು ನೇಣಿಗೇರಿಸಲು ಆದೇಶ ಮಾಡಿತ್ತು
ಯುಎನ್ಐ ಕೆಎಸ್ಆರ್ 1209