Wednesday, Feb 26 2020 | Time 10:37 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ನಿರ್ಭಯಾ ಪ್ರಕರಣ: ಗಲ್ಲು ತಡೆಗೆ ಸುಪ್ರೀಂ ಮೊರೆ ಹೋದ ಅಪರಾಧಿ ವಿನಯ್

ನವದೆಹಲಿ, ಜನವರಿ 9 (ಯುಎನ್‌ಐ) ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲ ಅಪರಾಧಿಗಳಿಗೆ ದೆಹಲಿ ನ್ಯಾಯಾಲಯ ಡೆತ್ ವಾರಂಟ್ ಹೊರಡಿಸಿದ ಬೆನ್ನಲ್ಲೇ, ಅಪರಾಧಿ ವಿನಯ್ ಶರ್ಮಾ ಗಲ್ಲು ತಡೆ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

ಘಟನೆಯ ಸಮಯದಲ್ಲಿ ವಿನಯ್ ಶರ್ಮಾಗೆ ಕೇವಲ 19 ವರ್ಷ ವಯಸ್ಸಾಗಿತ್ತು ಎಂದು ನ್ಯಾಯಾಲಯ ಪರಿಗಣಿಸಬೇಕಾಗಿತ್ತು. ನ್ಯಾಯಾಲಯವು ಸಾಮಾಜಿಕ-ಆರ್ಥಿಕ ಹಿನ್ನೆಲೆ ಮತ್ತು ಚಿಕ್ಕ ವಯಸ್ಸನ್ನು ಶಿಕ್ಷೆ ಪ್ರಮಾಣ ತಗ್ಗಿಸುವ ಅಂಶವನ್ನಾಗಿ ಪರಿಗಣಿಸಬೇಕು ಎಂದು ವಕೀಲ ಎ ಪಿ ಸಿಂಗ್ ಹೇಳಿದ್ದಾರೆ.
ಇತರ ಅಪರಾಧಿಗಳಾದ ಅಕ್ಷಯ್ ಮತ್ತು ಪವನ್ ಅವರೂ ಸಹ ಶೀಘ್ರದಲ್ಲೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.
ಜನವರಿ 7 ರಂದು ದೆಹಲಿ ನ್ಯಾಯಾಲಯವು ಎಲ್ಲಾ ಅಪರಾಧಿಗಳನ್ನು ಜನವರಿ 22 ರಂದು ತಿಹಾರ್ ಜೈಲಿನಲ್ಲಿ 0700 ಗಂಟೆಗೆ ಗಲ್ಲಿಗೇರಿಸಲು ಆದೇಶ ನೀಡಿದೆ.
ಯುಎನ್‍ಐ ಎಸ್‍ಎ ವಿಎನ್ 1305