Wednesday, Feb 26 2020 | Time 10:16 Hrs(IST)
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ನಿರ್ಭಯಾ ಪ್ರಕರಣ; ದೆಹಲಿ ತಲುಪಿದ ಮುಕೇಶ್ ಸಿಂಗ್ ಕ್ಷಮಾದಾನ ಅರ್ಜಿ

ನವದೆಹಲಿ, ಜ 16 (ಯುಎನ್ಐ) ನಿರ್ಭಯಾ ಪ್ರಕರಣದ ಅಪರಾಧಿ ಮುಕೇಶ್ ಸಿಂಗ್ ಸಲ್ಲಿಸಿರುವ ಕ್ಷಮಾದಾನ ಅರ್ಜಿ ದೆಹಲಿಯ ಗೃಹ ಸಚಿವಾಲಯ ತಲುಪಿದ್ದು, ಅದನ್ನು ಶೀಘ್ರದಲ್ಲೇ ರಾಷ್ಟ್ರಪತಿಗಳಿಗೆ ರವಾನಿಸಲಾಗುವುದು.
ರಾಷ್ಟ್ರಪತಿಗಳು ಈ ಕ್ಷಮಾದಾನ ಅರ್ಜಿಯ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.
ದೆಹಲಿ ಸರ್ಕಾರ ಈಗಾಗಲೇ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಶಿಫಾರಸು ಮಾಡಿದ್ದು, ಅದನ್ನು ಲೆಫ್ಟಿನೆಂಟ್ ಗವರ್ನರ್ ಕಚೇರಿಗೆ ರವಾನಿಸಿದೆ.
ಆರೋಪಿಗಳು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ ನಂತರ ಸಿಂಗ್ ಪರ ವಕೀಲರು ಕ್ಷಮಾದಾನ ಅರ್ಜಿ ಸಲ್ಲಿಸಿದ್ದರು.
ದೆಹಲಿ ಸರ್ಕಾರ ಅದೇ ದಿನ ಆ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿತ್ತು.
ಯುಎನ್ಐ ಎಸ್ಎಚ್ 1820