Wednesday, Feb 26 2020 | Time 10:33 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ನಿರ್ಭಯಾ ಪ್ರಕರಣ : ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ

ನಿರ್ಭಯಾ ಪ್ರಕರಣ :  ಕ್ಷಮಾದಾನ ಅರ್ಜಿ  ತಿರಸ್ಕರಿಸಿದ ರಾಷ್ಟ್ರಪತಿ
ನಿರ್ಭಯಾ ಪ್ರಕರಣ: ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ

ನವದೆಹಲಿ, ಜನವರಿ 17 (ಯುಎನ್ಐ ) ನಿರ್ಭಯಾ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅತ್ಯಾಚಾರಿಗಳ ಪೈಕಿ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಅವರು ತಿರಸ್ಕರಿದ್ದಾರೆ.

ಕೇಂದ್ರ ಗೃಹ ಸಚಿವಾಲಯದ ಶಿಫಾರಸ್ ಮೇರೆಗೆ ಅವರು ಈ ತೀರ್ಮಾನ ತೆಗೆದುಕೊಂಡಿದ್ದಾರೆ .

ಗೃಹ ಸಚಿವಾಲಯದ ಶಿಫಾರಸ್ ಪ್ರಕಾರ ಪ್ರಕಾರ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಕ್ಷಮಾಧಾನ ಮನವಿಯನ್ನು ತಿರಸ್ಕರಿದ್ದು ಹಂತಕರಿಗೆ ಗಲ್ಲು ಶಿಕ್ಷೆ ಜಾರಿ ಮಾಡಲು ಇದ್ದ ಅಡ್ಡಿ ಆತಂಕ ದೂರವಾಗಿದೆ.

ಮುಕೇಶ್ ಸಿಂಗ್ ಕೆಲ ದಿನಗಳ ಹಿಂದೆ ತನಗೆ ಕ್ಷಮಾದಾನ ನೀಡುವಂತೆ ಮನವಿ ಮಾಡಿಕೊಂಡಿದ್ದ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಗುರುವಾರ ಈ ಮನವಿಯನ್ನು ಗೃಹ ಸಚಿವಾಲಯಕ್ಕೆ ರವಾನಿಸಿ ಮನವಿ ತಿರಸ್ಕರಿಸುವಂತೆ ಶಿಫಾರಸು ಮಾಡಲಾಗಿತ್ತು .

2012ರಲ್ಲಿ ದೆಹಲಿಯಲ್ಲಿ ಆರು ಮಂದಿ ಸೇರಿ ನಿರ್ಭಯಾ(ಹೆಸರು ಬದಲಿಸಲಾಗಿದೆ) ಮೇಲೆ ಅಮಾನುಷ ರೀತಿಯಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಕೆಲ ದಿನಗಳ ಜೀವನ್ಮರಣ ಹೋರಾಟದ ಬಳಿಕ ಆಕೆ ದೂರದ ಸಿಂಗಾಪುರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಎಲ್ಲಾ 6 ಮಂದಿಯನ್ನು ಬಂಧಿಸಿದ್ದರೂ ಒಬ್ಬ ಬಾಲಾಪರಾಧಿ ಎಂಬ ಕಾರಣಕ್ಕೆ ಆತನಿಗೆ ಬಾಲಾಪರಾಧ ನಿಯಮದ ಪ್ರಕಾರ ಶಿಕ್ಷೆಯಾಗಿ ಹೊರ ಬಂದಿದ್ದಾನೆ. ರಾಮ್ ಸಿಂಗ್ ಎಂಬ ಪ್ರಮುಖ ಆರೋಪಿಯು ತಿಹಾರ್ ಜೈಲಿನಲ್ಲೇ ನೇಣಿಗೆ ಶರಣಾಗಿದ್ದ. ಉಳಿದ ನಾಲ್ವರಿಗೆ ಮರಣದಂಡನೆ ಶಿಕ್ಷೆ ಘೋಷಣೆಯಾಗಿದೆ. ಆದರೆ, ಮೇಲ್ಮನವಿ, ಕ್ಷಮಾದಾನ ಅರ್ಜಿಗಳ ಕಾರಣದಿಂದಾಗಿ ಅವರನ್ನು ಗಲ್ಲಿಗೇರಿಸುವುದು ತಡವಾಗಿದೆ.

ದೆಹಲಿ ಹೈಕೋರ್ಟ್ ಈ ನಾಲ್ವರಿಗೆ ಈಗಾಗಲೇ ಡೆತ್ ವಾರೆಂಟ್ ಹೊರಡಿಸಿ ಇದೇ 22ರಂದು ನೇಣಿಗೇರಿಸಲು ಆದೇಶ ಮಾಡಿತ್ತು

ಯುಎನ್ಐ ಕೆಎಸ್ಆರ್ 1240