Sunday, Mar 29 2020 | Time 00:33 Hrs(IST)
National Share

ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಲು ತಿಹಾರ್ ಜೈಲಿನಲ್ಲಿ ಹೊಸ ಗಲ್ಲು ಕಂಬ.!

ನವದೆಹಲಿ, ಜನವರಿ 3 (ಯುಎನ್ಐ) ನಿರ್ಭಯಾ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಹಂತಕರನ್ನು ಗಲ್ಲಿಗೇರಿಸಲು ತಿಹಾರ್ ಜೈಲಿನಲ್ಲಿ ಹೊಸ ಗಲ್ಲುಕಂಬ ಸಿದ್ಧಗೊಳಿಸಲಾಗುತ್ತಿದೆ.
ನಾಲ್ವರನ್ನೂ ಒಟ್ಟಿಗೆ ಗಲ್ಲಿಗೇರಿಸುವ ಸಲುವಾಗಿ ಈ ಗಲ್ಲುಕಂಬ ಸಿದ್ಧಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾದಲ್ಲಿ ನಾಲ್ವರು ಅಪರಾಧಿಗಳನ್ನು ಏಕಕಾಲದಲ್ಲೇ ಗಲ್ಲಿಗೇರಿಸಲಿರುವ ದೇಶದ ಮೊದಲ ಕಾರಗೃಹ ತಿಹಾರ್ ಜೈಲಾಗಲಿದೆ.
ಏಳು ವರ್ಷಗಳ ಹಿಂದಿನ ನಿರ್ಭಯಾ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಆರು ಅಪರಾಧಿಗಳಲ್ಲಿ ಒಬ್ಬನಾದ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ತೀರ್ಪು ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇತ್ತಿಚೆಗೆ ತಿರಸ್ಕರಿಸಿ, ನಾಲ್ವರು ಅಪರಾಧಿಗಳಿಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆಯನ್ನು ಸುಪ್ರೀಂ ನ್ಯಾಯಪೀಠ ಎತ್ತಿಹಿಡಿದಿತ್ತು.
ಆದರೆ, ರಾಷ್ಟ್ರಪತಿಗಳಲ್ಲಿ ಕ್ಷಮಾದಾನಕ್ಕೆ ಮನವಿ ಸಲ್ಲಿಸಲು ಆತನಿಗೆ ಒಂದು ವಾರ ಕಾಲಾವಕಾಶವನ್ನೂ ನೀಡಿದೆ.
ಇತ್ತ, ಮರಣದಂಡನೆ ಶಿಕ್ಷೆ ನೀಡಲಾಗಿರುವ ನಾಲ್ವರು ಅಪರಾಧಿಗಳನ್ನು ತಕ್ಷಣವೇ ನೇಣಿಗೆ ಏರಿಸಬೇಕು ಎಂದು ಕೋರಿ ನಿರ್ಭಯಾ ಪೋಷಕರು ಪಾಟಿಯಾಲ ಹೌಸ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ತೀರ್ಪು ಪ್ರಕಟವಾದ ಬೆನ್ನಲ್ಲೇ ನಿರ್ಭಯಾ ಪೋಷಕರ ಅರ್ಜಿ ವಿಚಾರಣೆ ನಡೆಯಿತು.
ರಾಷ್ಟ್ರಪತಿಗಳಲ್ಲಿ ಕ್ಷಮಾದಾನ ಕೋರಲು ನಾಲ್ವರು ದೋಷಿಗಳಿಗೆ ಒಂದು ವಾರ ಕಾಲಾವಕಾಶ ಕೊಟ್ಟಿರುವ ಹಿನ್ನೆಲೆಯಲ್ಲಿ ತಕ್ಷಣವೇ ಇವರನ್ನು ನೇಣುಗಂಬಕ್ಕೇರಿಸುವಂತೆ ಆದೇಶಿಸಲು ಪಾಟಿಯಾಲ ಹೌಸ್ ಕೋರ್ಟ್ ನಿರಾಕರಿಸಿ ವಿಚಾರಣೆಯನ್ನು ಇದೇ 7ಕ್ಕೆ ಮುಂದೂಡಿತ್ತು.
ಯುಎನ್ಐ ಕೆಎಸ್ಆರ್ 0832
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..