Wednesday, Feb 26 2020 | Time 09:47 Hrs(IST)
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ನಿರ್ಭಯಾ ಹಂತಕರ ಗಲ್ಲು ವಿಳಂಬಕ್ಕೆ ದೆಹಲಿ ಸರ್ಕಾರದ ನಿರ್ಲಕ್ಷ್ಯ: ಜಾವಡೇಕರ್

ನವದೆಹಲಿ, ಜನವರಿ, 16 (ಯುಎನ್ಐ) ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸುವ ಪ್ರಕ್ರಿಯೆ ವಿಳಂಬಕ್ಕೆ ದೆಹಲಿಯ ಆಮ್ ಆದ್ಮಿ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ ನಾಯಕ, ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಆರೋಪಿಸಿದ್ದಾರೆ.
2017ರಲ್ಲಿ ಗಲ್ಲುಶಿಕ್ಷೆ ವಿರುದ್ಧದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಬಳಿಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಪರಾಧಿಗಳಿಗೆ ನೋಟಿಸ್ ನೀಡಲು ಎರಡೂವರೆ ವರ್ಷಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡಿದ್ದಾರೆ ಎಂದು ದೂರಿದರು.
ಸುಪ್ರೀಂ ಕೋರ್ಟ್ ಆದೇಶ ಬಂದ ಒಂದು ವಾರದಲ್ಲಿ ಅತ್ಯಾಚಾರಿಗಳಿಗೆ ಎಎಪಿ ಸರ್ಕಾರ ನೋಟಿಸ್ ನೀಡಿದ್ದರೆ, ದೋಷಿಗಳನ್ನು ಈಗ ಗಲ್ಲಿಗೇರಿಸಬಹುದಿತ್ತು ಮತ್ತು ದೇಶಕ್ಕೆ, ಮಹಿಳಾ ಸಮುದಾಯಕ್ಕೆ ನ್ಯಾಯ ಸಿಗುತ್ತಿತ್ತು ಎಂದರು.
ಮುಕೇಶ್ (32), ವಿನಯ್ ಶರ್ಮಾ(26), ಅಕ್ಷಯ್ ಕುಮಾರ್(31) ಮತ್ತು ಪವನ್ ಗುಪ್ತಾ(25) ಈ ನಾಲ್ವರು ಅಪರಾಧಿಗಳನ್ನು ಇದೆ 22ರ ರಂದು 7 ಗಂಟೆಗೆ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಬೇಕಿದೆ.
ಆದರೆ, ಮುಕೇಶ್ ಸಿಂಗ್ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಆ ದಿನಕ್ಕೆ ನೇಣಿಗೆ ಹಾಕಲು ಸಾಧ್ಯವಾಗುವುದಿಲ್ಲ ಎಂದು ದೆಹಲಿ ಸರ್ಕಾರ ನ್ಯಾಯಾಲಯಕ್ಕೆ ಹೇಳಿದೆ.
ಈ ನಡುವೆ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸುವ ಕುರಿತು ಯಥಾಸ್ಥಿತಿ ವರದಿ ಕೊಡುವಂತೆ ದೆಹಲಿ ಕೋರ್ಟ್ ತಿಹಾರ್ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಯುಎನ್ಐ ಕೆಎಸ್ಆರ್ 2110