Monday, Sep 21 2020 | Time 11:17 Hrs(IST)
  • ಕೊರೋನಾ ಆರ್ಭಟ, 24 ಗಂಟೆಯಲ್ಲಿ 1,130 ಮಂದಿ ಸಾವು
  • ರಾಜ್ಯಸಭೆಯಲ್ಲಿ ಕೋಲಾಹಲ; 8 ಸದಸ್ಯರ ಅಮಾನತ್ತು
  • ರಾಜ್ಯಸಭೆಯಲ್ಲಿ ಕೋಲಾಹಲ; 8 ಸದಸ್ಯರ ಅಮಾನತ್ತು
  • ಕೊವಿಡ್‍-19: ಬ್ರೆಜಿಲ್‌ನಲ್ಲಿ ಸಾವಿನ ಸಂಖ್ಯೆ 1,36,895 ಕ್ಕೆ ಏರಿಕೆ
  • ಬ್ರೆಜಿಲ್‌ನಲ್ಲಿ ಹೆದ್ದಾರಿ ಅಪಘಾತ: 12 ಮಂದಿ ಸಾವು
  • ಪ್ರೇಮಸೌಧ, ತಾಜ್ ಮಹಲ್ ವೀಕ್ಷಣೆಗೆ ಸಾರ್ವಜನಿಕರಿಗೆ ಅನುಮತಿ
  • ಭಾರತ- ಚೀನಾ ನಡುವೆ ಇಂದು ಸೇನಾ ಮಟ್ಟದ ಮಾತುಕತೆ
  • ಮಹಾರಾಷ್ಟ್ರದಲ್ಲಿ ಕಟ್ಟಡ ಕುಸಿದು 8 ಮಂದಿ ಸಾವು
Karnataka Share

ನೆರೆ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ಇನ್ನೂ ಸಿಕ್ಕಿಲ್ಲ: ಪ್ರಜ್ವಲ್ ರೇವಣ್ಣ ಟೀಕೆ

ಹಾಸನ, ಆ.9(ಯುಎನ್ಐ) ಕಳೆದ ಬಾರಿ ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ಕೇವಲ ಭರವಸೆ ಸಿಕ್ಕಿತೇ ವಿನಃ ಸಮರ್ಪಕ ಪರಿಹಾರ ಇನ್ನೂ ಸಿಗಲಿಲ್ಲ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆರೋಪಿಸಿದ್ದಾರೆ.
ಕಳೆದ ವರ್ಷದ ಮಳೆಯಲ್ಲಿ ಮನೆ ಕಳೆದುಕೊಂಡವರಿಗೆ ಇನ್ನೂ ಕೂಡ ಸರ್ಕಾರ ಘೋಷಣೆ ಮಾಡಿದ್ದ ಪರಿಹಾರ ಪೂರ್ಣವಾಗಿ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿ ಟ್ವೀಟ್ ಮಾಡಿದ್ದಾರೆ.
ಈಗ ಈ ವರ್ಷ ಕೂಡ ಮಳೆಯಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರದ ಘೋಷಣೆ ಕೇವಲ ಘೋಷಣೆಗಷ್ಟೇ ಸೀಮಿತವಾಗದೆ ಸಂತ್ರಸ್ತರಿಗೆ ಸೂಕ್ತ ರೀತಿಯಲ್ಲಿ ಪೂರ್ಣ ಪ್ರಮಾಣದ ಪರಿಹಾರ ದೊರೆಯಬೇಕೆಂದು ಪ್ರಜ್ವಲ್, ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಆಗ್ರಹಿಸಿದ್ದಾರೆ.
ಯುಎನ್ಐ ಯುಎಲ್ 1228