Wednesday, Jan 29 2020 | Time 13:59 Hrs(IST)
  • ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ: ಎಂಟು ಮಂದಿ ಸಾವು, 40 ಜನರಿಗೆ ಗಾಯ
  • ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ‌ ನಾನಲ್ಲ: ಡಿ ಕೆ ಶಿವಕುಮಾರ್
  • ಕೇರಳ ವಿಧಾನಸಭೆಯಲ್ಲಿ ಮತ್ತೆ ಸಿಎಎ ಕಲಹ: ರಾಜ್ಯಪಾಲರ ಆಗಮನಕ್ಕೆ ತಡೆ ಒಡ್ಡಿದ ವಿಪಕ್ಷ ಸದಸ್ಯರು
  • ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವಂತೆ ನಾವು ಒತ್ತಡ ಹಾಕುತ್ತೇವೆ : ಡಾ ಜಿ ಪರಮೇಶ್ವರ್
  • ಹಾಕಿ: ಭಾರತ ವನಿತೆಯರಿಗೆ ನ್ಯೂಜಿಲೆಂಡ್ ವಿರುದ್ಧ ಎರಡನೇ ಸೋಲು
  • ಟಿಸಿಐ ಎಕ್ಸ್ ಪ್ರೆಸ್ ಸಂಸ್ಥೆಯ ತ್ರೈಮಾಸಿಕ ಹಣಕಾಸು ಸಾಧನೆ ಪ್ರಕಟ: 26 ಕೋಟಿ ರೂ ನಿವ್ವಳ ಲಾಭ
  • ಬಿಜೆಪಿ ಸೇರಿದ ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್
  • ಆಸ್ಟ್ರೇಲಿಯಾ ಓಪನ್: ಮೊದಲ ಬಾರಿ ಗ್ರ್ಯಾನ್ ಸ್ಲ್ಯಾಮ್ ಸೆಮಿಫೈನಲ್ ತಲುಪಿದ ಜ್ವೆರೆವ್
  • ರೌಡಿಶೀಟರ್ ಹತ್ಯೆಗೈದಿದ್ದ ಒಂಭತ್ತು ಜನರ ಬಂಧನ
  • ಕರೊನಾ ವೈರಸ್ ನಿಗ್ರಹಕ್ಕೆ “ತಾರಾ ಮಂತ್ರ” ದಿಂದ ಬ್ರಹ್ಮಾಂಡ ಪರಿಹಾರ; ದಲಾಯಿ ಲಾಮಾ ಸಲಹೆ
  • ಕಾಶ್ಮೀರದಲ್ಲಿ ಹೈಸ್ಪೀಡ್, ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್‌ ಸ್ಥಗಿತ ಮುಂದುವರಿಕೆ
  • ಮೂರನೇ ಟಿ-20 ಪಂದ್ಯ: ಟಾಸ್ ಗೆದ್ದು ಪೀಲ್ಡಿಂಗ್ ಆಯ್ದುಕೊಂಡ ನ್ಯೂಜಿಲೆಂಡ್
  • ದಲಿತರಿಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನಿರಾಕರಣೆ: ಸಿದ್ದರಾಮಯ್ಯ ಕಿಡಿ
  • ಪುಸ್ತಕ ಪ್ರೇಮಿಗಳಾಗಿ, ಜ್ಞಾನಾರ್ಜನೆ ಮಾಡಿಕೊಳ್ಳಿ ಸಿಎಂ ಮಮತಾ ಕಿವಿಮಾತು
  • ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಹರ್ಷವರ್ಧನ್ ಶ್ರಿಂಗ್ಲಾ ಅಧಿಕಾರ ಸ್ವೀಕಾರ
Karnataka Share

ನಾಳೆ ಉಪ ಕದನ ಫಲಿತಾಂಶ; ದೇವರ ಮೊರೆ ಹೋದ ಬಿಎಸ್‌ವೈ

ಬೆಂಗಳೂರು, ಡಿ.8 (ಯುಎನ್ಐ) ಇದೇ ತಿಂಗಳ 5ರಂದು ನಡೆದ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಾಳೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉತ್ತಮ ಫಲಿತಾಂಶಕ್ಕಾಗಿ ದೇವರ ಮೊರೆ ಹೋಗಿದ್ದಾರೆ.
ಸರ್ಕಾರ ಉಳಿಸಿಕೊಳ್ಳಲೇ ಬೇಕು ಎಂಬ ಹಠಕ್ಕೆ ಬಿದ್ದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ತೆರಳಿದ್ದಾರೆ.
ಸರ್ಕಾರದ ಉಳಿವಿಗಾಗಿ ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಉತ್ತಮ ಫಲಿತಾಂಶದೊಂದಿಗೆ ಮೂರೂವರೇ ವರ್ಷಗಳ ಕಾಲ ಸರ್ಕಾರ ಯಾವುದೇ ಅಡಚಣೆ, ತೊಂದರೆ ಇಲ್ಲದೆ ಮುಂದುವರಿಯಬೇಕು ಎಂಬ ಉದ್ದೇಶದಿಂದ ಅವರು ಧರ್ಮಸ್ಥಳಕ್ಕೆ ತೆರಳಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
12ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆದ್ದು ಸರ್ಕಾರ ಉಳಿಸಿಕೊಳ್ಳಲು ಪಣ ತೊಟ್ಟಿರುವ ಮುಖ್ಯಮಂತ್ರಿ ಯಡಿಯೂರಪ್ಪ, ದೇವರ ಮೊರೆ ಹೋಗಿದ್ದಾರೆ.
ಈ ಹಿಂದೆ ಲೋಕಸಭೆ ಚುನಾವಣಾ ಪ್ರಕಟವಾಗುವಾಗ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ‌ಕೂಡ ಮಂಜುನಾಥನ ಮೊರೆ ಹೋಗಿದ್ದರು. ಆದರೆ ಅಂದು ಅವರ ಪ್ರಾರ್ಥನೆ, ಬೇಡಿಕೆ ಫಲಕಾರಿಯಾಗಿರಲಿಲ್ಲ.
ಯುಎನ್ಐ ಎಸ್‌ಎಂಆರ್ ಎಎಚ್ 1250