Wednesday, Feb 26 2020 | Time 10:50 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ನಾಳಿನ ರಾಷ್ಟ್ರವ್ಯಾಪಿ ಮುಷ್ಕರಕ್ಕೆ 25 ಕೋಟಿ ಜನಬೆಂಬಲ : ಕಾರ್ಮಿಕರ ನಾಯಕರ ವಿಶ್ವಾಸ

ನವದೆಹಲಿ, ಜನವರಿ 7 (ಯುಎನ್ಐ)ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ವಿರೋಧಿಸಿ ನಾಳಿನ ಬಾರತ್ ಬಂದ್ ರಾಷ್ಟ್ರವ್ಯಾಪಿ ಮುಷ್ಕರದಲ್ಲಿ 25 ಕೋಟಿ ಜನರು ಭಾಗವಹಿಸಲಿದ್ದಾರೆ ಎಂದು ಕಾರ್ಮಿಕ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ
ಕಾರ್ಮಿಕ ಸಂಘಗಳು ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಸೆವಾ, ಎಐಸಿಸಿಟಿಯು, ಎಲ್‌ಪಿಎಫ್, ಯುಟಿಯುಸಿ ಜೊತೆಗೆ ವಿವಿಧ ವಲಯದ ಸ್ವತಂತ್ರ ಒಕ್ಕೂಟಗಳು ಮತ್ತು ಸಂಘಗಳು ನಾಳೆ ಮುಷ್ಕರ ನಡೆಸುವ ಬಗ್ಗೆ ಕಳೆದ ಸೆಪ್ಟೆಂಬರ್‌ನಲ್ಲೇ ತೀರ್ಮಾನ ಮಾಡಿದ್ದವು.
ಕಾರ್ಮಿಕ ವಿರೋಧಿ, ಜನ ವಿರೋಧಿ, ರಾಷ್ಟ್ರ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಇಂತಹ ಅನೇಕ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ನಾಯಕರು ಹೇಳಿದ್ದಾರೆ .
"ಕಾರ್ಮಿಕ ಸಚಿವಾಲಯವು ಜನವರಿ 2, 2020 ರಂದು ಸಭೆ ಕರೆದರೂ ಕಾರ್ಮಿಕರ ಯಾವುದೇ ಬೇಡಿಕೆಗಳನ್ನು ಈಡೇರಿಸಲು ವಿಫಲವಾಗಿದೆ ಎಂದೂ ನಾಯಕರು ದೂರಿದ್ದಾರೆ .
ಹೆಚ್ಚಿದ ಶುಲ್ಕ ಮತ್ತು ಶಿಕ್ಷಣದ ವ್ಯಾಪಾರೀಕರಣದ ವಿರುದ್ಧ ಧ್ವನಿ ಎತ್ತುವ ಕಾರ್ಯಸೂಚಿಯೊಂದಿಗೆ ಸುಮಾರು 60 ವಿದ್ಯಾರ್ಥಿ ಸಂಘಟನೆಗಳು ಸಹ ನಾಳಿನ ಮುಷ್ಕರದಲ್ಲಿ ಭಾಗವಹಿಸಲು ನಿರ್ಧರಿಸಿವೆ
ಯುಎನ್ಐ ಕೆಎಸ್ಆರ್ 0910