Monday, Jul 13 2020 | Time 04:09 Hrs(IST)
Special Share

ನಾಳೆಯಿಂದ ೨೦೦ ವಿಶೇಷ ಪ್ಯಾಸೆಂಜರ್ ರೈಲು ಸಂಚಾರ

ನವದೆಹಲಿ, ಮೇ ೩೧ (ಯುಎನ್‌ಐ) ನಾಳೆಯಿಂದ ದೇಶಾದ್ಯಂತ ೨೦೦ ವಿಶೇಷ ರೈಲುಗಳು ಸಂಚರಿಸಲಿವೆ. ಶ್ರಮಿಕ್ ವಿಶೇಷ ರೈಲುಗಳು ಹಾಗೂ ೩೦ ವಿಶೇಷ ಹವಾ ನಿಯಂತ್ರಿತ ರೈಲುಗಳಿಗೆ ಹೆಚ್ಚುವರಿಯಾಗಿ ಈ ರೈಲುಗಳು ಸಂಚರಿಸಿವೆ.
ಈ ರೈಲುಗಳು ಎಸಿ ಹಾಗೂ ಎಸಿಯೇತರ ದರ್ಜೆ ಬೋಗಿಗಳನ್ನು ಹೊಂದಿರುವ ಸಂಪೂರ್ಣ ಕಾಯ್ದಿರಿಸಿದ ರೈಲುಗಳಾಗಿವೆ. ಸಾಮಾನ್ಯ ಬೋಗಿಗಳ ಸೀಟುಗಳನ್ನು ಸಹ ಕಾಯ್ದಿರಿಸಲಾಗಿದೆ. ರೈಲಿನಲ್ಲಿ ಯಾವುದೇ ಕಾಯ್ದಿರಿಸದ ಬೋಗಿ ಇರುವುದಿಲ್ಲ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.
ನಾಳೆ ೧ ಲಕ್ಷ ೪೫ ಸಾವಿರ ಮಂದಿ ಪ್ರಯಾಣಿಕರು ಈ ರೈಲುಗಳಲ್ಲಿ ಪ್ರಯಾಣ ನಡೆಸಲಿದ್ದಾರೆ. ಜೂನ್ ೧ ರಿಂದ ೩೦ರವರೆಗೆ ಸುಮಾರು ೨೬ ಲಕ್ಷ ಪ್ರಯಾಣಿಕರು ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿದ್ದಾರೆ.

ಪ್ರಯಾಣಿಕರು ಥರ್ಮಲ್ ಸ್ಕಾನಿಂಗ್ ಗೆ ಒಳಗಾಗಲು ಸಾಧ್ಯವಾಗದಂತೆ ೯೦ ನಿಮಿಷಗಳ ಮುನ್ನವೇ ರೈಲು ನಿಲ್ದಾಣ ತಲುಪಬೇಕು. ಎಲ್ಲ ಪ್ರಯಾಣಿಕರನ್ನು ತಪಾಸಣೆ ಒಳಪಡಿಸಿದ ನಂತರವೇ ರೈಲು ಹತ್ತಲು ಅವಕಾಶ ಕಲ್ಪಿಸಲಾಗುತ್ತದೆ. ದೃಢಪಡಿಸಿದ ಟಿಕೆಟ್‌ಗಳನ್ನು ಹೊಂದಿರುವ ಪ್ರಯಾಣಿಕರಿಗೆ ಮಾತ್ರ ರೈಲ್ವೆ ನಿಲ್ದಾಣ ಪ್ರವೇಶ ಹಾಗೂ ರೈಲು ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಎಲ್ಲಾ ಪ್ರಯಾಣಿಕರು ಮುಖಗವಸು ಧರಿಸುವುದು ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.
ಯುಎನ್‌ಐ ಕೆವಿಆರ್ ೨೨ ೧೧
More News
ವಿಕಾಸ್ ದುಬೆ ಪ್ರಕರಣ; ಬ್ರಾಹ್ಮಣ ಸಮುದಾಯಕ್ಕೆ ಕಿರುಕುಳ ಬೇಡ; ಯೋಗಿ ಸರ್ಕಾರಕ್ಕೆ ಮಾಯಾವತಿ ಒತ್ತಾಯ

ವಿಕಾಸ್ ದುಬೆ ಪ್ರಕರಣ; ಬ್ರಾಹ್ಮಣ ಸಮುದಾಯಕ್ಕೆ ಕಿರುಕುಳ ಬೇಡ; ಯೋಗಿ ಸರ್ಕಾರಕ್ಕೆ ಮಾಯಾವತಿ ಒತ್ತಾಯ

12 Jul 2020 | 8:41 PM

ಲಕ್ನೋ, ಜುಲೈ ೧೨ (ಯುಎನ್‌ಐ) ಭೂಗತ ಪಾತಕಿ ವಿಕಾಸ್ ದುಬೆ ಪ್ರಕರಣ ಸಂಬಂಧ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ವಾಸ್ತವಾಂಶಗಳ ಆಧಾರದ ಮೇಲೆ ಕ್ರಮ ಜರುಗಿಸಬೇಕು.

 Sharesee more..
ಜುಲೈ ೧೮ ರಂದು ದ್ವಿತೀಯ ಪಿಯುಸಿ ಫಲಿತಾಂಶ; ಎಸ್  ಸುರೇಶ್ ಕುಮಾರ್

ಜುಲೈ ೧೮ ರಂದು ದ್ವಿತೀಯ ಪಿಯುಸಿ ಫಲಿತಾಂಶ; ಎಸ್ ಸುರೇಶ್ ಕುಮಾರ್

12 Jul 2020 | 6:42 PM

ಕುಕ್ಕೆ ಸುಬ್ರಮಣ್ಯ,ಜುಲೈ ೧೨(ಯುಎನ್ಐ) ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಗಳು ಜುಲೈ ೧೮ ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭಾನುವಾರ ತಿಳಿಸಿದ್ದಾರೆ.

 Sharesee more..
ಅಜ್ಞಾತ ಭಕ್ತನಿಂದ ತಿರುಪತಿ ತಿಮ್ಮಪ್ಪನಿಗೆ  ೨೦ ಚಿನ್ನದ  ಬಿಸ್ಕೆಟ್  !

ಅಜ್ಞಾತ ಭಕ್ತನಿಂದ ತಿರುಪತಿ ತಿಮ್ಮಪ್ಪನಿಗೆ ೨೦ ಚಿನ್ನದ ಬಿಸ್ಕೆಟ್ !

12 Jul 2020 | 6:35 PM

ತಿರುಮಲ, ಜುಲೈ ೧೨(ಯುಎನ್‌ಐ) ತಿರುಮಲ- ತಿರುಪತಿ ದೇವಸ್ಥಾನ ಆಸ್ತಿ ಪಾಸ್ತಿಗಳ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸಿದ ನಂತರ ಶ್ವೇತ ಪತ್ರ ಪ್ರಕಟಿಸಲಾಗುವುದು ಎಂದು ಟಿಟಿಡಿ ಇ ಓ ಅನಿಲ್ ಕುಮಾರ್ ಸಿಂಘಾಲ್ ಭಾನುವಾರ ತಿಳಿಸಿದ್ದಾರೆ.

 Sharesee more..
ದೇಶದಲ್ಲಿ 24 ಗಂಟೆಗಳಲ್ಲಿ 28 ಸಾವಿರಕ್ಕೂ ಹೆಚ್ಚು ಕೊರೊನಾ ಪೀಡಿತರು ಪತ್ತೆ

ದೇಶದಲ್ಲಿ 24 ಗಂಟೆಗಳಲ್ಲಿ 28 ಸಾವಿರಕ್ಕೂ ಹೆಚ್ಚು ಕೊರೊನಾ ಪೀಡಿತರು ಪತ್ತೆ

12 Jul 2020 | 6:19 PM

ನವದೆಹಲಿ, ಜುಲೈ 12 (ಯುಎನ್ಐ) ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಬಹಳ ವೇಗವಾಗಿ ಹೆಚ್ಚುತ್ತಿವೆ. ಕಳೆದ 24 ಗಂಟೆಗಳಲ್ಲಿ 28 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ 8.50 ಲಕ್ಷದ ಸನಿಹ ತಲುಪಿದೆ.

 Sharesee more..
ಕೋವಿಡ್: ಅಮಿತಾಬ್, ಅಭಿಷೇಕ್ ಆರೋಗ್ಯ ಸ್ಥಿರ

ಕೋವಿಡ್: ಅಮಿತಾಬ್, ಅಭಿಷೇಕ್ ಆರೋಗ್ಯ ಸ್ಥಿರ

12 Jul 2020 | 6:11 PM

ಮುಂಬೈ, ಜು 12 (ಯುಎನ್ಐ) ಕೋವಿಡ್ ಸೋಂಕು ದೃಢಪಟ್ಟಿರುವ ಬಾಲಿವುಡ್ ಬಿಗ್‌ ಬಿ ಅಮಿತಾಬ್ ಬಚ್ಚನ್ ಮತ್ತು ಪುತ್ರ, ನಟ ಅಭಿಷೇಕ್ ಬಚ್ಚನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದ ನಾನಾವತಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.

 Sharesee more..