Friday, Feb 28 2020 | Time 09:51 Hrs(IST)
  • ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ; ಶಿಕ್ಷಕ ಪೊಲೀಸರ ವಶಕ್ಕೆ
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
Special Share

ನಾಳೆ ರಾತ್ರಿ ಮೂರನೇ ವಾರ್ಷಿಕ ಮಂಗಳೂರು ಕಂಬಳ

ಮಂಗಳೂರು, ಜ 24(ಯುಎನ್ಐ) ರಾಮಲಕ್ಷ್ಮಣ ಕಂಬಳ ಎಂದೇ ಹೆಸರಾಗಿರುವ ಮೂರನೇ ವಾರ್ಷಿಕ ಮಂಗಳೂರು ಕಂಬಳ ನಗರದ ಬಂಗ್ರ ಕೊಳೊರು ಗೋಲ್ಡ್ ಪಿಂಚ್ ಮೈದಾನದಲ್ಲಿ ಜನವರಿ 25 ರ ರಾತ್ರಿ ಆಯೋಜಿಸಲಾಗಿದೆ ಎಂದು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಬ್ರಿಜೇಶ್ ಚೌಟಾ ಶುಕ್ರವಾರ ಪ್ರಕಟಿಸಿದ್ದಾರೆ.
ಆರು ವರ್ಗಗಳಲ್ಲಿ ರಾತ್ರಿ ಪೂರ್ತಿ ಕಂಬಳ ನಡೆಯಲಿದೆ. ಕಾರ್ಯಕ್ರಮವನ್ನು ಜನವರಿ 25ರಂದು ಬೆಳಗ್ಗೆ ಉದ್ಘಾಟಿಸಲಾಗುವುದು, ಮತ್ತೊಂದು ಕಾರ್ಯಕ್ರಮ ಸಂಜೆ 6 ಗಂಟೆಗೆ ನಡೆಯಲಿದೆ.
ಕಂಬಳ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ 26 ರಂದು ಬೆಳಗ್ಗೆ 8 ಗಂಟೆಗೆ ಆಯೋಜಿಸಲಾಗಿದೆ.
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ಸಚಿವ ಡಿ.ವಿ.ಸದಾನಂದಗೌಡ, ಸಂಸದ ನಳಿನ್ ಕುಮಾರ್ ಕಟೀಲ್ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ, ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ
ಯುಎನ್ಐ ಕೆವಿಆರ್ 1646