Wednesday, Feb 26 2020 | Time 09:29 Hrs(IST)
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ನೋವೆಲ್ ಕೊರೋನ ಸೋಂಕು ತಡೆಗೆ ಸೂಕ್ತ ಕ್ರಮ: ಆರೋಗ್ಯ ಸಚಿವಾಲಯ

ನವದೆಹಲಿ, ಜ 17 (ಯುಎನ್ಐ) ಚೀನಾ ಹಾಗೂ ವೂಹಾನ್ ನಲ್ಲಿ 41 ನೋವೆಲ್ ಕೊರೋನಾ ಸೋಂಕು (ಎನ್ ಸಿಒವಿ) ಪ್ರಕರಣಗಳು ದೃಢಪಟ್ಟಿರುವ ಹಿನ್ನೆಲೆಯಲ್ಲಿ ದೇಶದ ಆರೋಗ್ಯ ಸ್ಥಿತಿಗತಿಯ ಮೇಲೆ ನಿಗಾ ಇಟ್ಟಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
2020ರ ಜನವರಿ 5ರ ವೂಹಾನ್ ನಲ್ಲಿ ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿರುವುದು ವರದಿಯಾಗಿದೆ.
ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಸಂಪರ್ಕದಲ್ಲಿದೆ. ಆದರೆ ಈ ಸೋಂಕು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸಾಧ್ಯತೆ ಅತ್ಯಂತ ಕಡಿಮೆಯಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಡಬ್ಲ್ಯುಎಚ್ ಒ ಪ್ರಕಾರ, ಪರಿಸ್ಥಿತಿ ಇನ್ನೂ ಸುಧಾರಣಾ ಹಂತದಲ್ಲಿದ್ದು, ಸಮುದ್ರ ಆಹಾರದ ಮಾರುಕಟ್ಟೆಯಿಂದ ಸೋಂಕು ಹರಡುತ್ತಿದೆಯೇ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ.
ಆರೋಗ್ಯ ಇಲಾಖೆಯ ಕಾರ್ಯದರ್ಶಿ ಪ್ರೀತಿ ಸೂಡಾನ್, ಪ್ರತಿನಿತ್ಯ ಆರೋಗ್ಯ ಇಲಾಖೆಯ ಸಿದ್ಧತೆಯ ಕುರಿತು ಪರಿಶೀಲಿಸಲಾಗುತ್ತಿದೆ. ಎನ್ ಸಿಓವಿ ಸೋಂಕು ದೇಶದೊಳಗೆ ಪ್ರವೇಶಿಸದಂತೆ ನಿಗಾ ವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ಕೂಡ ಸಂಪರ್ಕದಿಂದಿದ್ದು, ವಿಮಾನ ನಿಲ್ದಾಣಗಳ ವಲಸೆ ಕೇಂದ್ರಗಳ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದರು.
ಕೊರೋನ ವೈರಸ್ ಒಂದು ಸೋಂಕಿನ ಗುಂಪಾಗಿದ್ದು, ಒಂಟೆ, ಬೆಕ್ಕು ಮತ್ತು ಬಾವಲಿಗಳಿಂದ ಹರಡುತ್ತದೆ.
ಯುಎನ್ಐ ಎಸ್ಎಚ್ 1729