Wednesday, Feb 26 2020 | Time 10:34 Hrs(IST)
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
 • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
National Share

ನೆಹರೂ ವಿವಿ ಕ್ಯಾಂಪಸ್ ಮೇಲೆ ದಾಳಿ: ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ

ನವದೆಹಲಿ, ಜನವರಿ 6 (ಯುಎನ್ಐ) ಜವಾಹರ ಲಾಲ್ ನೆಹರೂ ವಿಶ್ವವಿದ್ಯಾನಿಯಲದ ಕ್ಯಾಂಪಸ್ ಮೇಲೆ ಮುಸುಕುಧಾರಿ ಗೂಂಡಾಗಳು ನಡೆಸಿದ ಹಲ್ಲೆ, ಧಾಂದಲೆಗೆ ದೇಶದ ಉದ್ದಗಕ್ಕೂ ವ್ಯಾಪಕ ಟೀಕೆ ವ್ಯಕ್ತವಾಗಿ , ಇದನ್ನು ಖಂಡಿಸಿ ವಿದ್ಯಾರ್ಥಿಗಳ ಆಕ್ರೋಶ ಮಡುಗಟ್ಟಿದೆ.
'ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ದೇಶಾದ್ಯಂತ ವಿದ್ಯಾರ್ಥಿಗಳ ವಿರುದ್ಧ ಸಮರ ಸಾರಿ, ವಿಶ್ವವಿದ್ಯಾನಿಲಯಗಳನ್ನೂ ಆಶಾಂತಿಯ ಬೀಡನ್ನಾಗಿ ಮಾಡುತ್ತಿದೆ ಎಂದು ಜೆಎನ್ಯು ಮಾಜಿ ವಿದ್ಯಾರ್ಥಿ ನಾಯಕ ಕನ್ಹಯ್ಯ ಕುಮಾರ್ ಟೀಕಿಸಿದ್ದಾರೆ.
ಇದು ಲಜ್ಜೆಗೇಡಿ ಸರ್ಕಾರ. ಮೊದಲು ಶುಲ್ಕ ಏರಿಸಿತು. ವಿದ್ಯಾರ್ಥಿಗಳು ಇದಕ್ಕೆ ಪ್ರತಿಭಟನೆ ವ್ಯಕ್ತಪಡಿಸಿದಾಗ ಪೊಲೀಸರಿಂದ ಹಲ್ಲೆ ಮಾಡಿಸಿತು. ವಿದ್ಯಾರ್ಥಿಗಳು ಕದಲದಿದ್ದಾಗ ಸರ್ಕಾರ ಗೂಂಡಾಗಳನ್ನು ಕಳುಹಿಸಿ ಹಲ್ಲೆ ಮಾಡಿಸಿ ಅಮಾಯಕರ ಬಲಿಗೆ ಹಾತೊರೆಯುತ್ತಿದೆ ಎಂದು ಅವರು ಎಂದು ಟ್ವೀಟ್ ಮಾಡಿದ್ದಾರೆ.
ದೊಣ್ಣೆ, ರಾಡ್ ಹಾಗೂ ಮತ್ತಿತರ ಮಾರಕ ಆಯುಧಗಳನ್ನು ಹೊಂದಿದ್ದ ಮುಸುಕುಧಾರಿಗಳು ರಾತ್ರಿ ಕ್ಯಾಂಪಸ್ಗೆ ನುಗ್ಗಿ ನಡೆಸಿದ ದಾಂಧಲೆಯಲ್ಲಿ ಜೆಎನ್ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಐಶ್ ಘೋಷ್ ಸೇರಿದಂತೆ 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಕ್ಯಾಂಪಸ್ನಲ್ಲಿ ಸುಮಾರು ಎರಡು ಗಂಟೆ ಕೋಲಾಹಲ ನಡೆದಿತ್ತು.

ಈ ಘಟನೆ ಖಂಡಿಸಿ ದೇಶದಾದ್ಯಂತ ವಿಧ್ಯಾರ್ಥಿಗಳ ಪ್ರತಿಭಟನೆ ಭುಲೆದ್ದಿದೆ.ಕಾಲೇಜು ತರಗತಿ ಬಹಿಷ್ಕರಿಸಿ ಅನೇಕ ಕಡೆ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ.
ಯುಎನ್ಐ ಕೆಎಸ್ಆರ್ 1200