Wednesday, Feb 26 2020 | Time 10:41 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಪರೀಕ್ಷಾ ಪೇ ಚರ್ಚಾ ಸಂವಾದಲ್ಲಿ 50 ದಿವ್ಯಾಂಗ ವಿದ್ಯಾರ್ಥಿಗಳು ಭಾಗಿ

ನವದೆಹಲಿ, ಜನವರಿ, 19 (ಯುಎನ್ಐ ) ನಾಳೆ ನಡೆಯಲಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ ದೇಶದ ವಿವಿಧ ಶಾಲೆಗಳ 50 ದಿವ್ಯಾಂಗ ವಿದ್ಯಾರ್ಥಿಗಳು ಪ್ರಧಾನಿ ಜೊತೆ ಸಂವಾದ ನಡೆಸಲಿದ್ದಾರೆ.
ರಾಷ್ಟ್ರ ರಾಜಧಾನಿ ನವದೆಹಲಿಯ ತಾಲ್ಕೊಟರಾ ಕ್ರೀಡಾಂಗಣಲದಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ನಡೆಯಲಿದೆ. ಪರೀಕ್ಷಾ ಒತ್ತಡದಿಂದ ಹೊರಬರುವ ಬಗ್ಗೆ ಪ್ರಧಾನಿ ಮೋದಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ.
ವಿವಿಧ ರಾಜ್ಯಗಳ ವಿದ್ಯಾರ್ಥಿಗಳಿಗೆ ಈ ಅವಕಾಶ ಸಿಕ್ಕಿದೆ ಎಂದು ಮಾನವ ಸಂಪನ್ಮೂಲ ಇಲಾಖೆ ಸಚಿವಾಲಯದ ಜಂಟಿ ನಿರ್ದೇಶಕಿ ಆರ್ಸಿ ಮೀನಾ ತಿಳಿಸಿದ್ದಾರೆ.
ಪರೀಕ್ಷಾ ಒತ್ತಡವನ್ನು ನಿಭಾಯಿಸು' ಎಂಬ ಪರಿಕಲ್ಪನೆಯಲ್ಲಿ ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಿ, ವಿಶೇಷ ಚೇತನ ಮಕ್ಕಳನ್ನು ಸಂವಾದಕ್ಕೆ ಆಯ್ಕೆ ಮಾಡಲಾಗಿದೆ. ಅತ್ಯುತ್ತಮ ಚಿತ್ರಕಲೆಗಳನ್ನು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ವೇಳೆ ಪ್ರದರ್ಶನಕ್ಕಿಡಲಾಗುತ್ತದೆ.ಕಳೆದ ವರ್ಷ 1.4 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಬಂಧ ಬರೆದಿದ್ದರು..
ಯುಎನ್ಐ ಕೆಎಸ್ಆರ್ 1112