Monday, Jul 22 2019 | Time 07:04 Hrs(IST)
  • ಶಾಸಕರು ರಾಜಕೀಯ ವ್ಯಭಿಚಾರ ಮಾಡಿದ್ದಾರೆ : ದಿನೇಶ್ ಗುಂಡೂರಾವ್ ಗಂಭೀರ ಆರೋಪ
International Share

ಪಾಕ್ ನಲ್ಲಿ ರೈಲು ಡಿಕ್ಕಿ: 10 ಮಂದಿ ಸಾವು, 50 ಮಂದಿಗೆ ಗಾಯ

ಇಸ್ಲಾಮಾಬಾದ್, ಜುಲೈ 11 (ಯುಎನ್‌ಐ) ಪಾಕಿಸ್ತಾನದ ಪೂರ್ವ ನಗರ ರಹೀಂ ಯಾರ್ ಖಾನ್‌ನಲ್ಲಿ ಗುರುವಾರ ಬೆಳಿಗ್ಗೆ ಪ್ರಯಾಣಿಕರ ರೈಲು ಸರಕು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 10 ಜನರು ಸಾವನ್ನಪ್ಪಿ, ಇತರೆ 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಪ್ರಯಾಣಿಕರ ರೈಲು ಪೂರ್ವ ಲಾಹೋರ್‌ನಿಂದ ಕ್ವೆಟ್ಟಾ ನಗರಕ್ಕೆ ಹೋಗುತ್ತಿದ್ದಾಗ ಪಂಜಾಬ್ ಪ್ರಾಂತ್ಯದ ರಹೀಮ್ ಯಾರ್ ಖಾನ್‌ನ ವಾಲ್ಹಾರ್ ರೈಲ್ವೆ ನಿಲ್ದಾಣದಲ್ಲಿ ಸರಕು ರೈಲಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ಪರಿಣಾಮವಾಗಿ ಪ್ರಯಾಣಿಕರ ರೈಲಿನ ಹಲವು ಬೋಗಿಗಳು ಹಳಿ ತಪ್ಪಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ನಂತರ, ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸೇರಿದ್ದಾರೆ.
ಗಾಯಗೊಂಡವರಲ್ಲಿ ಹಲವಾರು ಮಂದಿ ಗಂಭೀರ ಸ್ಥಿತಿಯಲ್ಲಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
ಯುಎನ್ಐ ಕೆಎಸ್ಆರ್ ಜಿಎಸ್ಆರ್ 1153