Wednesday, Feb 26 2020 | Time 10:45 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಪಾಕಿಸ್ತಾನದಲ್ಲಿ ಸಿಖ್ಖರ ಮೇಲಿನ ಹಿಂಸಾಚಾರ ಪ್ರತಿಭಟಿಸಿ ವಿಎಚ್‍ಪಿ, ಭಜರಂಗದಳ ಧರಣಿ

ನವದೆಹಲಿ, ಜ 7 (ಯುಎನ್‍ಐ)- ಪಾಕಿಸ್ತಾನದಲ್ಲಿ ಸಿಖ್ಖರ ಮೇಲೆ ನಡೆಯುತ್ತಿರುವ ಹಿಂಸಾಚಾರ ಪ್ರತಿಭಟಿಸಿ ವಿಶ್ವ ಹಿಂದೂ ಪರಿಷತ್ (ವಿಎಚ್‍ಪಿ) ಮತ್ತು ಭಜರಂಗ ದಳ ಕಾರ್ಯಕರ್ತರು ಮಂಗಳವಾರ ಪಾಕಿಸ್ತಾನ ಧೂತವಾಸ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
‘ ಸಿಖ್ಖರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಪ್ರತಿಭಟನೆ ದಾಖಲಿಸಿದ್ದೇವೆ. ಈ ಪ್ರತಿಭಟನೆಗಳಿಂದ ಪಾಕಿಸ್ತಾನ ತಕ್ಷಣವೇ ಪಾಠ ಕಲಿಯಬೇಕು. ಪಾಕಿಸ್ತಾನಕ್ಕೆ ಪ್ರತಿಭಟನೆ ಮೂಲಕ ಸೂಕ್ತ ಸಂದೇಶ ಕಳುಹಿಸಿದ್ದೇವೆ.’ ಎಂದು ವಿಎಚ್ ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
‘ಪಾಕಿಸ್ತಾನ ಸಮಾಜದಲ್ಲಿ ದ್ವೇಷದ ಗೋಡೆ ಇದೆ. ಇದು ಕೇವಲ ಹಿಂದೂ ಮತ್ತು ಸಿಖ್ಖರ ವಿರುದ್ಧವಾಗಿಲ್ಲ. ಅಹ್ಮದೀಯರು, ಸುನ್ನಿ ಮತ್ತು ಶಿಯಾ ಸಮುದಾಯಗಳ ನಡುವೆ ದ್ವೇಷದ ಗೋಡೆ ಇದೆ. ಪಾಕಿಸ್ತಾನ ಬದುಕುಳಿಯುವುದಕ್ಕೆ ಈ ವಿಷಯ ಬೆದರಿಯಾಗುತ್ತಿದೆ.’ ಎಂದು ಅವರು ಹೇಳಿದ್ದಾರೆ.
‘ ಧಾರ್ಮಿಕ ಅಲ್ಪಸಂಖ್ಯಾತರಿಗೆ ಅಗತ್ಯ ರಕ್ಷಣೆ ನೀಡಲು ಪಾಕಿಸ್ತಾನ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದೇವೆ. ಇಲ್ಲವಾದಲ್ಲಿ ವಿಶ್ವದ ಕಠಿಣ ಅಭಿಪ್ರಾಯವೇ ಇದನ್ನು ಮಾಡಲು ಪಾಕಿಸ್ತಾನದ ಮೇಲೆ ಒತ್ತಡ ಹೇರಲಿದೆ.’ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.
ಪಾಕಿಸ್ತಾನದ ಪೇಶಾವರದಲ್ಲಿ ಸಿಖ್ ಸಮುದಾಯದ ವ್ಯಕ್ತಿಯ ಹತ್ಯೆ ಮತ್ತು ನಂಕಾನ ಸಾಹಿಬ್ ನಲ್ಲಿ ಗುರುದ್ವಾರ ಮೇಲೆ ನಡೆದಿರುವ ದಾಳಿ ಕುರಿತಂತೆ ಭಾರತ ಸರ್ಕಾರ ಸೋಮವಾರ ಪಾಕಿಸ್ತಾನ ರಾಯಭಾರಿ ಸಯ್ಯದ್ ಹೈದರ್ ಶಾ ಅವರನ್ನು ಕರೆಸಿಕೊಂಡು ತನ್ನ ತೀವ್ರ ಪ್ರತಿಭಟನೆಯನ್ನು ದಾಖಲಿಸಿತ್ತು.
ಯುಎನ್‍ಐ ಎಸ್‍ಎಲ್‍ಎಸ್ 1246