Sunday, Mar 29 2020 | Time 00:43 Hrs(IST)
National Share

ಪಾಕಿಸ್ತಾನ ಯಾರೊಬ್ಬರ ಯುದ್ಧದ ಭಾಗವಾಗುವುದಿಲ್ಲ: ಅಮೆರಿಕ-ಇರಾನ್ ಬಿಕ್ಕಟ್ಟು ಕುರಿತು ಇಮ್ರಾನ್ ಪ್ರತಿಕ್ರಿಯೆ

ಪಾಕಿಸ್ತಾನ ಯಾರೊಬ್ಬರ ಯುದ್ಧದ ಭಾಗವಾಗುವುದಿಲ್ಲ: ಅಮೆರಿಕ-ಇರಾನ್ ಬಿಕ್ಕಟ್ಟು ಕುರಿತು ಇಮ್ರಾನ್ ಪ್ರತಿಕ್ರಿಯೆ
ಪಾಕಿಸ್ತಾನ ಯಾರೊಬ್ಬರ ಯುದ್ಧದ ಭಾಗವಾಗುವುದಿಲ್ಲ: ಅಮೆರಿಕ-ಇರಾನ್ ಬಿಕ್ಕಟ್ಟು ಕುರಿತು ಇಮ್ರಾನ್ ಪ್ರತಿಕ್ರಿಯೆ

ಇಸ್ಲಾಮಾಬಾದ್, ಜ 10(ಯುಎನ್‍ಐ)- ಅಮೆರಿಕ ಮತ್ತು ಇರಾನ್ ನಡುವಿನ ಬಿಕ್ಕಟ್ಟು ಪರಿಹಾರಕ್ಕೆ ಮಧ್ಯಸ್ಥಿಕೆ ವಹಿಸುವುದಾಗಿ ಹೇಳಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಪಾಕಿಸ್ತಾನ ಯಾರೊಬ್ಬರ ಯುದ್ಧದ ಭಾಗವಾಗದೆ ಎರಡೂ ದೇಶಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಪ್ರಯತ್ನಿಸುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

‘ನಾವು ಇರಾನ್ ಮತ್ತು ಅಮೆರಿಕ ನಡುವೆ ಸ್ನೇಹ ಬಾಂಧವ್ಯ ಪುನರ್ ಸ್ಥಾಪಿಸಲು ಪ್ರಯತ್ನಿಸುತ್ತೇವೆ. ಅಮೆರಿಕ ಮತ್ತು ಇರಾನ್ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಯುವಂತಾಗಲು ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಲು ಸಿದ್ಧವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ತಿಳಿಸಲಾಗಿದೆ.’ ಎಂದು ಇಮ್ರಾನ್ ಖಾನ್ ಹೇಳಿಕೆಯನ್ನು ಉಲ್ಲೇಖಿಸಿ ಡಾನ್ ಪತ್ರಿಕೆ ವರದಿ ಮಾಡಿದೆ.

‘ಪಾಕಿಸ್ತಾನ ಈ ಹಿಂದೆ ಮತ್ತೊಂದು ದೇಶದ ಯುದ್ಧದಲ್ಲಿ ಭಾಗಿಯಾಗಿ ತಪ್ಪು ಮಾಡಿರುವುದರಿಂದ ಮತ್ತೆ ಇನ್ನೊಂದು ದೇಶದ ಯುದ್ಧದಲ್ಲಿ ಭಾಗಿಯಾಗಲು ಇಚ್ಛಿಸುವುದಿಲ್ಲ.’ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

‘ಯುದ್ಧಗಳಲ್ಲಿ ಯಾರೊಬ್ಬರೂ ವಿಜಯ ಸಾಧಿಸಿದ್ದಾರೆಂದು ಹೇಳಲು ಆಗುವುದಿಲ್ಲ. ಏಕೆಂದರೆ ಜಯ ಸಾಧಿಸಿದವನೇ ನಷ್ಟ ಕಂಡಿರುತ್ತಾನೆ. ಭಯೋತ್ಪಾದನೆ ವಿರುದ್ಧದ ಸಮರದಲ್ಲಿ ಪಾಕಿಸ್ತಾನ ಭಾಗಿಯಾಗುವುದರೊಂದಿಗೆ ಭಾರೀ ಬೆಲೆ ತೆರೆದಿದೆ. ಇದೀಗ ಪಾಕಿಸ್ತಾನ ಯುದ್ಧಗಳಲ್ಲಿ ಭಾಗಿಯಾಗುವುದಿಲ್ಲ. ಆದರೆ, ದೇಶಗಳನ್ನು ಒಂದುಗೂಡಿಸಲು ಪ್ರಯತ್ನಿಸುತ್ತದೆ.’ ಎಂದು ಅವರು ಹೇಳಿದ್ದಾರೆ.

ಯುಎನ್‍ಐ ಎಸ್‍ಎಲ್‍ಎಸ್ 1302

More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..