Friday, Feb 28 2020 | Time 09:36 Hrs(IST)
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಪ್ಯಾನ್ - ಆಧಾರ್‌ ಲಿಂಕ್ , ಕೊನೆ ದಿನಾಂಕ ವಿಸ್ತರಣೆ

ನವದೆಹಲಿ, ಡಿ 31 (ಯುಎನ್ಐ) ಶಾಶ್ವತ ಖಾತೆ ಸಂಖ್ಯೆ (ಪ್ಯಾನ್) ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಮುಂದಿನ ವರ್ಷದ ಮಾರ್ಚ್ ವರೆಗೆ ವಿಸ್ತರಿಸಲಾಗಿದೆ.
ಸಿಬಿಡಿಟಿ ಸೋಮವಾರ ಇದನ್ನು ಸ್ಪಷ್ಟಪಡಿಸಿದ್ದು, ಹಿಂದಿನ ಗಡುವು ಡಿಸೆಂಬರ್ 31 ಮಂಗಳವಾರಕ್ಕೆ ಕೊನೆಯಾಗಬೇಕಿತ್ತು.
"ಆದಾಯ ತೆರಿಗೆ ಕಾಯ್ದೆ, 1961 ರ ಸೆಕ್ಷನ್ 139 ಎಎಯ ಉಪವಿಭಾಗ 2 ರ ಅಡಿಯಲ್ಲಿ ನಿರ್ದಿಷ್ಟಪಡಿಸಿದಂತೆ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಜೋಡಿಸುವ ದಿನಾಂಕವನ್ನು 2019 ರ ಡಿಸೆಂಬರ್ 31 ರಿಂದ 2020 ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದೆ.
ಐ-ಟಿ ಇಲಾಖೆಗೆ ನೀತಿಯನ್ನು ರೂಪಿಸುವ ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಈ ಕುರಿತು ಅಧಿಸೂಚನೆ ಹೊರಡಿಸಿದೆ.
ಯುಎನ್ಐ ಕೆಎಸ್ಆರ್ 1150