Wednesday, Feb 26 2020 | Time 10:45 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಪ್ರಕಾಶ್ ಜಾವಡೇಕರ್ ಅವರಿಂದ ಮೊದಲ ‘ಅಂತಾರಾಷ್ಟ್ರೀಯ ಯೋಗ ದಿನ’ ಮಾಧ್ಯಮ ಪ್ರಶಸ್ತಿ ಪ್ರದಾನ

ಪ್ರಕಾಶ್ ಜಾವಡೇಕರ್ ಅವರಿಂದ ಮೊದಲ ‘ಅಂತಾರಾಷ್ಟ್ರೀಯ ಯೋಗ ದಿನ’ ಮಾಧ್ಯಮ ಪ್ರಶಸ್ತಿ ಪ್ರದಾನ
ಪ್ರಕಾಶ್ ಜಾವಡೇಕರ್ ಅವರಿಂದ ಮೊದಲ ‘ಅಂತಾರಾಷ್ಟ್ರೀಯ ಯೋಗ ದಿನ’ ಮಾಧ್ಯಮ ಪ್ರಶಸ್ತಿ ಪ್ರದಾನ

ನವದೆಹಲಿ, ಜ 7(ಯುಎನ್‍ಐ)- ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಮಂಗಳವಾರ ಇಲ್ಲಿ 30 ಮಾಧ್ಯಮ ಸಂಸ್ಥೆಗಳಿಗೆ ಮೊದಲ ‘ಅಂತಾರಾಷ್ಟ್ರೀಯ ಯೋಗ ದಿನ’ ಮಾಧ್ಯಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ದೇಶ ಮತ್ತು ವಿದೇಶಗಳಲ್ಲಿ ಯೋಗದ ಮಹತ್ವ ತಿಳಿಸಿ ಹಾಗೂ ಜಾಗೃತಿ ಮೂಡಿಸುವಲ್ಲಿ ಪಾತ್ರ ವಹಿಸಿದ್ದಕ್ಕಾಗಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಮೊದಲ ‘ಅಂತಾರಾಷ್ಟ್ರೀಯ ಯೋಗ ದಿನ’ ಮಾಧ್ಯಮ ಪ್ರಶಸ್ತಿಗಳಾಗಿ ಕನ್ನಡ ಮತ್ತು 16 ಭಾಷೆಗಳ 132 ಮಾಧ್ಯಮ ಸಂಸ್ಥೆಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಅಂತಿಮವಾಗಿ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಸಿ.ಕೆ.ಪ್ರಸಾದ್ ಅಧ್ಯಕ್ಷತೆಯ ಆರು ಸದಸ್ಯರ ಸಮಿತಿ 30 ಮಾಧ್ಯಮ ಸಂಸ್ಥೆಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಿತ್ತು.

ಯೋಗದ ಮಹತ್ವದ ಬಗ್ಗೆ ಪ್ರಸ್ತಾಪಿಸಿದ ಜಾವಡೇಕರ್ ಅವರು, ತಡೆಗಟ್ಟಬಹುದಾದ ರೋಗಗಳಿಗೆ ಯೋಗ ಅತಿ ಮುಖ್ಯವಾಗಿದೆ. ಯೋಗದ ಬಗ್ಗೆ ಜನರಿಗೆ ಸಂದೇಶ ಕಳುಹಿಸಲು ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಯೋಗದ ಬಗ್ಗೆ ಅತ್ಯುತ್ತಮ ವರದಿ ಮಾಡಿದ 11 ದಿನಪತ್ರಿಕೆಗಳು ಯೋಗದ ಬಗ್ಗೆ ಅತ್ಯುತ್ತಮ ಕಾರ್ಯಕ್ರಮಗಳು ಮತ್ತು ಸುದ್ದಿಗಳನ್ನು ಪ್ರಸಾರ ಮಾಡಿದ 8 ಟಿ.ವಿ.ವಾಹಿನಿಗಳು ಮತ್ತು 11 ರೇಡಿಯೋಗಳಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ.

ಸಮಾರಂಭದಲ್ಲಿ ಹಾಜರಿದ್ದ ಆಯುಷ್ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ಮಾತನಾಡಿ, ಯೋಗದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮ ಕೊಡುಗೆಯನ್ನು ಶ್ಲಾಘನೀಯ. ಇದು ಸಕಾರಾತ್ಮಕ ಹೆಜ್ಜೆಯಾಗಿದ್ದು, ಜಾಗೃತಿಯನ್ನು ಮತ್ತಷ್ಟು ವ್ಯಾಪಿಸಲು ಸಹಕಾರಿಯಾಗಲಿದೆ ಎಂದರು.

ನ್ಯಾಯಮೂರ್ತಿ ಪ್ರಸಾದ್ ಮಾತನಾಡಿ, ಯೋಗಕ್ಕೆ ಯಾವುದೇ ಖರ್ಚಾಗುವುದಿಲ್ಲವಾದ್ದರಿಂದ ಜನರಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಭಾರತದ ಯೋಗ, ವಿಶ್ವಕ್ಕೂ ವ್ಯಾಪಿಸಿ, ಎಲ್ಲಡೆ ಸ್ವೀಕೃತವಾಗಿದೆ ಎಂದು ಹೇಳಿದರು.

ಯುಎನ್‍ಐ ಎಸ್‍ಎಲ್‍ಎಸ್ 1454