Sunday, Mar 29 2020 | Time 00:45 Hrs(IST)
National Share

ಪ್ರಚಾರ ರಂಗು, ಕೇಜ್ರಿವಾಲ್ ವಿರುದ್ಧ 90 ಅಭ್ಯರ್ಥಿಗಳು ಕಣಕ್ಕೆ

ಪ್ರಚಾರ ರಂಗು, ಕೇಜ್ರಿವಾಲ್ ವಿರುದ್ಧ 90 ಅಭ್ಯರ್ಥಿಗಳು  ಕಣಕ್ಕೆ
ಪ್ರಚಾರ ರಂಗು, ಕೇಜ್ರಿವಾಲ್ ವಿರುದ್ಧ 90 ಅಭ್ಯರ್ಥಿಗಳು ಕಣಕ್ಕೆ

ನವದೆಹಲಿ, ಜನವರಿ, 23(ಯುಎನ್ಐ ) ಮುಂದಿನ ತಿಂಗಳ 8ರಂದು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದೆ.

ನವದೆಹಲಿ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಆಮ್ ಆದ್ಮಿ ಪಕ್ಷದ ಸಂಚಾಲಕ, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ 90 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಈ ಪೈಕಿ ‘ಚಕ್ ದೇ ಇಂಡಿಯಾ’ ಸಿನಿಮಾ ಖ್ಯಾತಿಯ ಶೈಲೇಂದ್ರ ಸಿಂಗ್ ಶಲ್ಲಿ ಕೂಡ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಅವರು ಈಗ “ಅಂಜಾನ್ ಆದ್ಮಿ ಪಾರ್ಟಿ’ ಯ ಸದಸ್ಯ ಎಂದು ಹೇಳಿಕೊಂಡಿದ್ದು, ಚಕ್ ದೇ ಇಂಡಿಯಾ’ ಸಿನೆಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

2009 ರಲ್ಲಿ ಬಸ್ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಪ್ರಯಾಣಿಕರನ್ನು ರಕ್ಷಿಸುವ ಮೂಲಕ ಸುದ್ದಿ ಯಾಗಿದ್ದರು.

ಈವರೆಗೆ ಚುನಾವಣೆಗಾಗಿ 1,029 ಮಂದಿ ಅಭ್ಯರ್ಥಿಗಳು 1,528 ನಾಮಪತ್ರ ಸಲ್ಲಿಸಿದ್ದಾರೆಂದು ಚುನಾವಣಾ ಆಯೋಗದ ಮೂಲಗಳು ಹೇಳಿದೆ.

ಯುಎನ್ಐ ಕೆಎಸ್ಆರ್ 1152

More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..