Wednesday, Feb 26 2020 | Time 09:55 Hrs(IST)
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಪ್ರತಿಪಕ್ಷಗಳ ರಾಜಕೀಯ ಪಿತೂರಿಯಿಂದ ಜೆಎನ್‍ಯು ನಲ್ಲಿ ಹಿಂಸಾಚಾರ: ಕೇಂದ್ರ ಸಚಿವ ನಿತ್ಯಾನಂದ ರೈ

ನವದೆಹಲಿ, ಜ 7(ಯುಎನ್‍ಐ)-ದ ರೈ ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್‍ಯು)ನಲ್ಲಿ ನಡೆದಿರುವ ಹಿಂಸಾಚಾರ, ಪ್ರತಿಪಕ್ಷಗಳ ಪಿತೂರಿಯ ಫಲಶ್ರುತಿಯಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಮಂಗಳವಾರ ಟೀಕಿಸಿದ್ದಾರೆ.
‘ಜೆಎನ್‍ಯುನಲ್ಲಿ ನಡೆದಿರುವ ಹಿಂಸಾಚಾರ ರಾಜಕೀಯ ಪಕ್ಷಗಳ ಪಿತೂರಿಯ ಭಾಗವಾಗಿದೆ. ವಿದ್ಯಾರ್ಥಿಗಳು ದೇಶದ ಭವಿಷ್ಯ ಎಂದು ಪ್ರತಿಪಕ್ಷಗಳಿಗೆ ಹೇಳಲು ಇಚ್ಛಿಸುತ್ತೇನೆ. ವಿದ್ಯಾರ್ಥಿಗಳನ್ನು ದಾರಿ ತಪ್ಪಿಸದಂತೆ ಕಾಂಗ್ರೆಸ್ ಮುಖಂಡರು ಮತ್ತು ಅರವಿಂದ್ ಕೇಜ್ರಿವಾಲ್ ಅವರಂತಹ ವ್ಯಕ್ತಿಗಳು ಒತ್ತಾಯಿಸುತ್ತಿದ್ದೇನೆ.’ ಎಂದು ಅವರು ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಪರವಾಗಿ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಮೆರವಣಿಗೆಯಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿ ಅವರು ಈ ವಿಷಯ ತಿಳಿಸಿದ್ದಾರೆ.
ರಾಜಕೀಯ ಉದ್ದೇಶಗಳಿಗೆ ಬಲಿಯಾಗಬಾರದು ಎಂದು ವಿದ್ಯಾರ್ಥಿಗಳಿಗೆ ಮನವಿ ಮಾಡಿದ ಅವರು, ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಎಲ್ಲರೂ ಹಾರೈಸೋಣ ಎಂದು ಹೇಳಿದ್ದಾರೆ.
ಪ್ರತಿಪಕ್ಷಗಳು ಸುಳ್ಳು ಪ್ರಚಾರ ನಡೆಸಿರುವಂತೆ ಸಿಎಎ ಯಾವುದೇ ಸಮುದಾಯದ ವಿರುದ್ಧವಲ್ಲ ಎಂದ ನಿತ್ಯಾನಂದ ರೈ ಅವರು, ಪ್ರಧಾನಮಂತ್ರಿ ನರೇಂದ್ರಮೋದಿ ಅವರ ನಾಯಕತ್ವದಲ್ಲಿ ದೇಶದ ಜನರು ಸುರಕ್ಷಿತವಾಗಿದ್ದು, ಅಭಿವೃದ್ಧಿಯಲ್ಲಿ ಮೈಲಿಗಲ್ಲು ಸ್ಥಾಪಿಸುತ್ತಿರುವುದನ್ನು ಜನರಿಗೆ ಮನವರಿಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ನಿತ್ಯಾನಂದ ರೈ ಅವರು ದೆಹಲಿ ವಿಧಾನಸಭಾ ಚುನಾವಣೆಯ ಬಿಜೆಪಿ ಸಹ ಉಸ್ತುವಾರಿಗಳಾಗಿದ್ದಾರೆ.
ಯುಎನ್‍ಐ ಎಸ್‍ಎಲ್‍ಎಸ್ 1308