Wednesday, Feb 26 2020 | Time 10:19 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಪೌರತ್ವ ಕಾಯ್ದೆಗೆ ಸದ್ಗುರು ಬೆಂಬಲ ಶ್ಲಾಘಿಸಿದ ಮೋದಿ

ನವದೆಹಲಿ, ಡಿ 30 (ಯುಎನ್ಐ) ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಸದ್ಗುರು ಜಗ್ಗಿ ವಾಸುದೇವ್ ಅವರು ಕಾಯ್ದೆಗೆ ಬೆಂಬಲ ಸೂಚಿಸಿದ್ದು, ಇದನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಅವರು, ಇತ್ತೀಚೆಗೆ ಸದ್ಗುರು ಅವರನ್ನು ಭೇಟಿ ಮಾಡಿ ಕಾಯ್ದೆಯ ಕುರಿತು ವಿವರಿಸಿದ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಮೋದಿ, ಇದು ತೀರಾ ತಡವಾಗಿ ದೊರೆಯುತ್ತಿರುವ ಸಣ್ಣ ಪ್ರಮಾಣದ ಕಾಳಜಿಯಾಗಿದೆ ಎಂದು ವಿವರಿಸಿದ್ದಾರೆ.

“ಸಿಎಎ ಕುರಿತು ಸದ್ಗುರು ಅವರೊಂದಿಗೆ ಚರ್ಚಿಸಿದ್ದು, ದೇಶದ ಐತಿಹಾಸಿಕ ಸಂಗತಿ, ಸಹೋದರತೆಯ ಕುರಿತು ಅನೇಕ ವಿಷಯಗಳನ್ನು ಅರಿಯಲು ಸಂತಸವಾಯಿತು. ಅವರು ಕಾಯ್ದೆಯ ಕುರಿತು ತಪ್ಪು ಮಾಹಿತಿ ಪ್ರಸಾರಿಸುತ್ತಿರುವವರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ” ಎಂದು ಮೋದಿ ತಿಳಿಸಿದ್ದಾರೆ.

ಇಂದು ಕೂಡ ಯಾವುದೇ ವಿದೇಶಿಗರು ಸಹಜ ಪ್ರಕ್ರಿಯೆಯ ಮೂಲಕ ದೇಶದ ಪೌರತ್ವ ಪಡೆಯಲು ಸಾಧ್ಯವಿದೆ ಎಂದು ಮೋದಿ ತಿಳಿಸಿದ್ದಾರೆ.

ಕಾಯ್ದೆಯ ಕುರಿತು ದೇಶಾದ್ಯಂತ ವ್ಯಕ್ತವಾಗಿರುವ ಆಕ್ರೋಶಕ್ಕೆ ಅಚ್ಚರಿ ವ್ಯಕ್ತಪಡಿಸಿದ್ದ ಸದ್ಗುರು, ಕಾಲೇಜು ವಿದ್ಯಾರ್ಥಿಗಳು ಕಾಯ್ದೆಯನ್ನು ಓದದೆ ಅನಕ್ಷರಸ್ಥರಂತೆ ಹಿಂಸಾಚಾರದಲ್ಲಿ ತೊಡಗುವುದು ಆಶ್ಚರ್ಯ ತಂದಿದೆ ಎಂದಿದ್ದರು.

ಜೊತೆಗೆ, ಕೇಂದ್ರ ಸರ್ಕಾರ ಕಾಯ್ದೆಯ ನಿಜವಾದ ಉದ್ದೇಶ ಮತ್ತು ಅದರ ವ್ಯಾಪ್ತಿಯನ್ನು ಸಾರ್ವಜನಿಕರಿಗೆ ತಲುಪಿಸಲು ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.
ಯುಎನ್ಐ ಎಸ್ಎಚ್ 1205