Friday, Feb 28 2020 | Time 08:47 Hrs(IST)
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಪೌರತ್ವ ತಿದ್ದುಪಡಿ ಕಾಯ್ದೆಗೆ ಸದ್ಗುರು ಜಗ್ಗಿ ವಾಸುದೇವ್ ಬೆಂಬಲ: ಪ್ರಧಾನಿ ಪ್ರಶಂಸೆ

ನವದೆಹಲಿ, ಡಿ30(ಯುಎನ್‍ಐ)- ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶಾದ್ಯಂತ ಪ್ರತಿಭಟನೆಗಳು ಮುಂದುವರೆದಿರುವ ನಡುವೆಯೇ ಕಾಯ್ದೆಗೆ ಬೆಂಬಲ ವ್ಯಕ್ತಪಡಿಸಿರುವ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಪ್ರಧಾನಿ ನರೇಂದ್ರಮೋದಿ ಪ್ರಶಂಸಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯ ಅಗತ್ಯತೆಯನ್ನು ವಿವರಿಸಿ, ತಡವಾದರೂ ಕಾಯ್ದೆಗೆ ತಿದ್ದುಪಡಿಯನ್ನು ತಂದಿರುವುದು ಸ್ವಾಗತಾರ್ಹ ಎಂದು ಆದ್ಯಾತ್ಮಿಕ ನಾಯಕ ಸದ್ಗುರು ಜಗ್ಗಿ ವಾಸುದೇವ್ ಹೇಳಿರುವ ವಿಡಿಯೋವನ್ನು ಪ್ರಧಾನಿ ಟ್ವಿಟರ್‍ನಲ್ಲಿ ಹಂಚಿಕೊಂಡಿದ್ದಾರೆ.
‘ಸದ್ಗುರು ಅವರು ಕಾಯ್ದೆಗೆ ಸಂಬಂಧಿಸಿದ ಎಲ್ಲ ಆಯಾಮಗಳನ್ನು ವಿವರಿಸಿದ್ದಾರೆ. ನಮ್ಮ ಸೋದರತ್ವವನ್ನು ಜಾಣ್ಮೆಯಿಂದ ಪ್ರಸ್ತಾಪಿಸಿದ್ದಾರೆ. ಪಟ್ಟಭದ್ರ ಹಿತಾಸಕ್ತಿಗಳು ಹರಡುತ್ತಿರುವ ತಪ್ಪು ಮಾಹಿತಿಗೆ ಕಿವಿಗೊಡಬಾರದು ಎಂದು ಕರೆ ನೀಡಿದ್ದಾರೆ’ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ನಿಯಮಾವಳಿಗಳನ್ನು ಅನುಸರಿಸುವ ಮೂಲಕ ಯಾವುದೇ ದೇಶದ ವ್ಯಕ್ತಿಗಳು ಯಾವುದೇ ಧರ್ಮಕ್ಕೆ ಸೇರಿದ್ದರೂ ಭಾರತೀಯ ಪೌರತ್ವ ಪಡೆಯಬಹುದಾಗಿದೆ.
ಕಾಯ್ದೆಯ ಹೆಸರಿನಲ್ಲಿ ದೇಶದಲ್ಲಿ ಹಿಂಸಾಚಾರ ನಡೆಯುತ್ತಿರುವುದನ್ನು ಖಂಡಿಸಿರುವ ಸದ್ಗುರು ಅವರು, ಕಾಯ್ದೆಯ ಬಗ್ಗೆ ಓದದೆ ಕಾಲೇಜು ವಿದ್ಯಾರ್ಥಿಗಳು ಸಹ ಅನಕ್ಷರಂತೆ ಹಿಂಸಾಚಾರದಲ್ಲಿ ತೊಡಗಿರುವುದು ದುರಂತ ಎಂದು ಹೇಳಿದ್ದಾರೆ.
ಕಾಯ್ದೆಯ ಅಂಶಗಳನ್ನು ಮತ್ತು ಅದರ ಉದ್ದೇಶವನ್ನು ಜನರಿಗೆ ತಲುಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದಿರುವ ಸದ್ಗುರು ಅವರು, ಮುಸ್ಲೀಮರು ಪೌರತ್ವ ಕಳೆದುಕೊಳ್ಳಲಿದ್ದಾರೆ ಎಂದು ಕೆಲ ವ್ಯಕ್ತಿಗಳು ಜನಸಮುದಾಯವನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಎಲ್ಲ ದೇಶಗಳಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಸಾಮಾನ್ಯ ನಿಯಮಾವಳಿಯಾಗಿದೆ. ಅಂದರೆ, ಆಯಾ ದೇಶಗಳಲ್ಲಿ ಪ್ರತಿಯೊಬ್ಬ ಪ್ರಜೆಯೂ ನೋಂದಣಿ ಮಾಡಿಸಿಕೊಳ್ಳಬೇಕಾಗಿದೆ. ಯಾವುದೇ ದೇಶಕ್ಕೆ ಇದು ಅಗತ್ಯವೂ ಆಗಿದೆ ಎಂದು ಸದ್ಗುರು ಅವರು ಹೇಳಿದ್ದಾರೆ.
uni sls 1227