Sunday, Mar 29 2020 | Time 00:03 Hrs(IST)
National Share

ಪೌರತ್ವ ತಿದ್ದುಪಡಿ ಕಾಯ್ದೆ ತಡೆಗೆ ಸುಪ್ರೀಂ ನಕಾರ : ಕೇಂದ್ರದ ಉತ್ತರಕ್ಕೆ ನಾಲ್ಕು ವಾರಗಳ ಗಡುವು

ನವದೆಹಲಿ, ಜ 22 (ಯುಎನ್‍ಐ) ದೇಶದ ಹಲವೆಡೆ ಪೌರತ್ವ ತಿದ್ದುಪಡಿ ಕಾಯ್ದೆ ಸಿಎಎ ವಿರೋಧಿ ಪ್ರತಿಭಟನೆ ನಡಯುತ್ತಿರುವಾಗಲೇ, ಕಾಯ್ದೆ ಜಾರಿ ತಡೆಗೆ ಸುಪ್ರೀಂಕೋರ್ಟ್ ನಕಾರ ಸೂಚಿಸಿದೆ

ಸಿಎಎ ಸಿಂಧುತ್ವಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ವೇಳೆ ಕೇಂದ್ರ ಸರ್ಕಾರದ ವಾದವನ್ನು ಆಲಿಸದೆಯೇ ಸಾಂವಿಧಾನಿಕ ತಿದ್ದುಪಡಿ ಕಾಯ್ದೆಯನ್ನು ತಡೆಯಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.
ಇದೇವೇಳೆ ಕಾಯ್ದೆಯ ಸಿಂಧುತ್ವಕ್ಕೆ ಸಂಬಂಧಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ನಾಲ್ಕು ವಾರಗಳ ಅವಧಿಯಲ್ಲಿ ವಿವರವಾದ ಪ್ರತಿಕ್ರಿಯೆ ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎಸ್ ಎ ಬೊಬ್ಡೆ ನೇತೃತ್ವದ ನ್ಯಾಯಪೀಠ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಅರ್ಜಿದಾರರೊಬ್ಬರ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸಿಎಎ ಕಾರ್ಯಾಚರಣೆಯನ್ನು ತಡೆಹಿಡಿಯಬೇಕು ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯ ವ್ಯಾಯಾಮವನ್ನು ಸದ್ಯಕ್ಕೆ ಮುಂದೂಡಬೇಕೆಂದು ನ್ಯಾಯಾಲಯವನ್ನು ಒತ್ತಾಯಿಸಿದರು.


ಸಿಎಎ ಕುರಿತು 140 ಕ್ಕೂ ಹೆಚ್ಚು ಅರ್ಜಿಗಳನ್ನು ಈಗಾಗಲೇ ಸಲ್ಲಿಸಲಾಗಿರುವುದರಿಂದ ಹೆಚ್ಚಿನ ಅರ್ಜಿಗಳನ್ನು ಸಲ್ಲಿಸುವುದನ್ನು ಸ್ಥಗಿತಗೊಳಿಸುವಂತೆ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದರು.

ಯುಎನ್ಐ ಎಸ್‍ಎ ವಿಎನ್ 1245
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..