Friday, Feb 28 2020 | Time 08:09 Hrs(IST)
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಪೌರತ್ವ ತಿದ್ದುಪಡಿ ಕಾಯ್ದೆ – ವಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ : ಅಮಿತ್ ಶಾ

ನವದೆಹಲಿ, ಜ 5 (ಯುಎನ್ಐ) ಪೌರತ್ವ ತಿದ್ದುಪಡಿ ಕಾಯಿದೆಯ ನಿಬಂಧನೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಮತ್ತು ಇತರ ಕೆಲವು ಪಕ್ಷಗಳು ಜನರನ್ನು ತಪ್ಪುದಾರಿಗೆ ಎಳೆಯುತ್ತಿರುವುದರಿಂದ ದೇಶದಾದ್ಯಂತ ಹಿಂಸಾಚಾರ ನಡೆಯುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.

ದೆಹಲಿಯಲ್ಲಿ ಭಾನುವಾರ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ಕುರಿತಂತೆ ವಿಪಕ್ಷಗಳ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.

ಪಾಕಿಸ್ತಾನದ ನಾನಾ ಸಾಹಿಬ್ ಗುರುದ್ವಾರದ ಮೇಲೆ ನಡೆದ ಇತ್ತೀಚಿನ ದಾಳಿ, ನೆರೆ ರಾಷ್ಟ್ರದಲ್ಲಿ ಧಾರ್ಮಿಕ ಕಿರುಕುಳಕ್ಕೆ ಒಳಗಾದವರಿಗೆ ಪರಿಹಾರ ಒದಗಿಸುವ ಪೌರತ್ವ ಕಾಯ್ದೆಯ ಮಹತ್ವವನ್ನು ಪ್ರತಿಪಾದಿಸುತ್ತದೆ ಎಂದು ಹೇಳಿದರು.

ಈ ಕಾಯಿದೆಯಿಂದಾಗಿ ಭಾರತದಲ್ಲಿರುವ ಅಲ್ಪಸಂಖ್ಯಾತ ನಾಗರಿಕರಿಗೆ ಯಾವುದೇ ಅಪಾಯವಿಲ್ಲ ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಕೇಜ್ರೀವಾಲ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೆಲವರು ಜನರನ್ನು ಒಂದು ಬಾರಿ ದಾರಿ ತಪ್ಪಿಸಬಹುದು, ಆದರೆ ಎಲ್ಲ ಕಾಲದಲ್ಲೂ ಅದು ಸಾಧ್ಯವಿಲ್ಲ ಎಂದರು.

ಇದೇ ಸಂದರ್ಭದಲ್ಲಿ ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಮಾತನಾಡಿ, ವಂಶ ಪಾರಂಪರ್ಯ ಆಡಳಿತದಿಂದ ಮುಕ್ತವಾಗಿರುವುದು ತಮ್ಮ ಪಕ್ಷ ಮಾತ್ರ ಎಂದರು. ಅಲ್ಲದೇ ತಮ್ಮ ಪಕ್ಷ ಸಿದ್ಧಾಂತದ ನೆಲೆಗಟ್ಟಿನಲ್ಲಿದೆ ಎಂದು ಪ್ರತಿಪಾದಿಸಿದರು.

ಹಿರಿಯ ಬಿಜೆಪಿ ನಾಯಕರಾದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಹರ್ ದೀಪ್ ಸಿಂಗ್ ಪುರಿ, ಹರ್ಷವರ್ಧನ್ ಮತ್ತಿತರರು ಭಾಗಿಯಾಗಿದ್ದರು.
ಯುಎನ್ಐ ಜಿಎಸ್ಆರ್ 2109