Sunday, Mar 29 2020 | Time 00:41 Hrs(IST)
National Share

ಪೌರತ್ವ ತಿದ್ದುಪಡಿ, ತಪ್ಪಿತಸ್ಥರ ಮೇಲೆ ಕ್ರಮಕ್ಕಾಗಿ ಸಲ್ಲಿಸಿರುವ ಅರ್ಜಿ ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ

ನವದೆಹಲಿ, ಫೆ 26 (ಯುಎನ್ಐ) ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ, ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ.
ಪೊಲೀಸರು ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು. ಜತೆಗೆ ಆರೋಪಿಗಳ ಮೇಲೆ ಎಫ್‌ಐಆರ್ ದಾಖಲಿಸುವಂತೆ ಕೋರಿ
ಮಾಜಿ ಮುಖ್ಯ ಮಾಹಿತಿ ಆಯುಕ್ತ ವಾಜತ್ ಅಬಿಬುಲ್ಲಾ ಮತ್ತಿತರರು ನ್ಯಾಯಪೀಠಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ನ್ಯಾಯಮೂರ್ತಿಗಳಾದ ಎಸ್.ಕೆ. ಪಾಲ್ ಹಾಗೂ ಕೆ.ಎಂ. ಜೋಸೆಫ್ ಅವರನ್ನೊಳಗೊಂಡ ವಿಭಾಗೀಯ ಪೀಠ ವಿಚಾರಣೆ ನಡೆಸಲಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ, ದೆಹಲಿಯ ಶಾಹಿನ್‌ಭಾಗ್ ಪ್ರದೇಶದಲ್ಲಿ ಬೀಡು ಬಿಟ್ಟು ಪ್ರತಿಭಟನೆ ನಡೆಸುತ್ತಿರುವವರನ್ನು ತೆರವುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಈಗಾಗಲೇ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಅರ್ಜಿಸಲು ಸಹ ಇಂದು ವಿಚಾರಣೆಗೆ ಬರಲಿದೆ.
ಯುಎನ್ಐ ವಿಎನ್ 0812
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..